ಬೆಂಗಳೂರಿನಲ್ಲಿ 50% ಟ್ರಾಫಿಕ್ ಫೈನ್ ಡಿಸ್ಕೌಂಟ್ – ಒಂದೇ ವಾರದಲ್ಲಿ 21 ಕೋಟಿ ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ (Traffic Rules Break) ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿತ್ತು. ಇದೀಗ ಒಂದೇ ವಾರದಲ್ಲಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹವಾಗಿದೆ.

ಆ.21ರಂದು ಟ್ರಾಫಿಕ್ ಫೈನ್‌ಗೆ (Traffic Fine) 50% ಡಿಸ್ಕೌಂಟ್ ಆದೇಶ ನೀಡಲಾಗಿತ್ತು. ಆ.23 ರಿಂದ ಸೆ.12 ರ ವರೆಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ವಾಹನ ಸವಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಳೆದ ಆರು ದಿನದಲ್ಲಿ 7,43,160 ಕೇಸ್ ವಿಲೇವಾರಿ ಮಾಡಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹ ಮಾಡಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ -‌ NIAಗೆ ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಳ್ಳೋಕೆ ಅವಕಾಶ ಇದೆ: ಡಿವಿಎಸ್‌

ಬೆಂಗಳೂರು (Bengaluru) ವ್ಯಾಪ್ತಿಗೆ ಮಾತ್ರ ಈ ಡಿಸ್ಕೌಂಡ್ ನೀಡಿದ್ದು, ವಾಹನ ಸವಾರರ ರಿಯಾಕ್ಷನ್ ನೋಡಿಕೊಂಡು ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕೇ ಬೇಡವೇ ಅನ್ನೋದು ತೀರ್ಮಾನ ಮಾಡುವ ಸಾಧ್ಯತೆ ಇದೆ. ಇನ್ನೂ ಹತ್ತು ದಿನಗಳ ಕಾಲ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಅವಕಾಶವಿದ್ದು, ಸುಮಾರು 50 ಕೋಟಿಯಷ್ಟು ದಂಡ ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.