ರಾಯಚೂರು: ಜಿಲ್ಲೆಯ ನಿಜಲಿಂಗಪ್ಪ ಕಾಲೋನಿಯಲ್ಲಿ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಖದೀಮರು ಕಳ್ಳತನ ಮಾಡಿದ್ದಾರೆ.
ರಮೇಶ್ ನಾಡಗೌಡ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ನವೆಂಬರ್ 16 ಕ್ಕೆ ಮನೆಗೆ ಬೀಗ ಹಾಕಿ ರಮೇಶ್ ಹಾಗೂ ಅವರ ಕುಟುಂಬದವರು ಊರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದನ್ನು ತಿಳಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮೊದಲು ಮನೆಯ ಬೀಗ ಮುರಿದು ನಂತರ ಮನೆಯಲ್ಲಿದ್ದ ಸುಮಾರು 22 ಲಕ್ಷ ಮೌಲ್ಯದ 750 ಗ್ರಾಂ ಚಿನ್ನಾಭರಣ ಹಾಗೂ 1 ಲಕ್ಷ 50 ಸಾವಿರ ರೂಪಾಯಿ ನಗದು ಕಳ್ಳತನ ಮಾಡಲಾಗಿದೆ.

ಊರಿಗೆ ಹೋಗಿದ್ದ ರಮೇಶ್ ಹಾಗೂ ಅವರ ಕುಟುಂಬಸ್ಥರು ಇಂದು ಮನೆಗೆ ಮರಳಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ಘಟನೆ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply