ದಿನದ 24 ಗಂಟೆಯೂ ಹಿಂದೂ-ಮುಸ್ಲಿಂ ದ್ವೇಷ ಹರಡಲಾಗ್ತಿದೆ – ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ಕಿಡಿ

ನವದೆಹಲಿ: ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ದಿನದ 24 ಗಂಟೆಯೂ ಹಿಂದೂ-ಮುಸ್ಲಿಮರ (Hindu-Muslim ನಡುವೆ ದ್ವೇಷವನ್ನು ಹರಡುತ್ತಿದೆ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ (New Delhi) ಕೆಂಪು ಕೋಟೆಯಲ್ಲಿ ʼಭಾರತ್‌ ಜೋಡೋ ಯಾತ್ರೆʼಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ಅಸ್ತ್ರವನ್ನಾಗಿ ಬಳಸಿಕೊಂಡು ದ್ವೇಷವನ್ನು ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಸ್ಟಾರ್ ನಟ ಕಮಲ್ ಹಾಸನ್ ಭಾಗಿ

ನಾನು 2,800 ಕಿಮೀ ನಡೆದಿದ್ದೇನೆ. ಆದರೆ ಯಾವುದೇ ದ್ವೇಷವನ್ನು ನೋಡಲಿಲ್ಲ. ಆದರೆ ಟಿವಿ ಆನ್ ಮಾಡಿದಾಗ, ನಾನು ಹಿಂಸೆಯನ್ನು ನೋಡುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ನರೇಂದ್ರ ಮೋದಿಯವರ ಸರ್ಕಾರವಲ್ಲ. ಇದು ಅಂಬಾನಿ ಮತ್ತು ಅದಾನಿ ಸರ್ಕಾರ. ಇಂದು ಪದವಿ ಪಡೆದ ಯುವಕರು ಪಕೋಡಾಗಳನ್ನು ಮಾರುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಭೂಮಿ ವಿವಾದ – ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಮಥುರಾ ಕೋರ್ಟ್ ಆದೇಶ

ದೆಹಲಿಯಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆಯಲ್ಲಿ ನಟ ಕಮಲ್‌ ಹಾಸನ್‌ ಕೂಡ ಪಾಲ್ಗೊಂಡಿದ್ದರು. “ದೇಶವನ್ನು ಒಗ್ಗೂಡಿಸಲು ಸಹಾಯ ಮಾಡಿ, ಒಡೆಯಬೇಡಿ” ಎಂದು ಇದೇ ವೇಳೆ ಹಾಸನ್‌ ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *