ಕುಡಿದ ಅಮಲಿನಲ್ಲಿ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಚಾಮರಾಜನಗರ: ಕುಡಿದ ಅಮಲಿನಲ್ಲಿ ಯುವಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ.

ಚಂದಕವಾಡಿ ಗ್ರಾಮದ ಶಶಿಕುಮಾರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಮದ್ಯ ಸೇವಿಸಿದ್ದ ಶಶಿಕುಮಾರ್ ಮನೆಯಲ್ಲಿ ಯಾರು ಇಲ್ಲದೆ ಇರುವಾಗ ಬೆಂಕಿ ಹಚ್ಚಿಕೊಂಡಿದ್ದಾನೆ. ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಮನೆಯ ಒಳಗೆ ಬೆಂಕಿಯ ಹಚ್ಚಿಕೊಂಡಿದ್ದರಿಂದ ಮನೆಗೂ ಬೆಂಕಿ ಹೊತ್ತಿಕೊಂಡು ಉರಿದಿದೆ. ಇದನ್ನು ನೋಡಿದ ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಮುಂದಾದರು. ಅಲ್ಲದೆ ಅಗ್ನಿಶಾಮ ದಳಕ್ಕೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮ ದಳವು ಬೆಂಕಿಯನ್ನು ನಂದಿಸಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಶಶಿಕುಮಾರ್ ಪ್ರಾಣಬಿಟ್ಟಿದ್ದ.

ಸ್ಥಳಕ್ಕೆ ಭೇಟಿ ನೀಡಿದ ರಾಮಸಮುದ್ರ ಪೂರ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಶಶಿಕುಮಾರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ರಾಮಸಮುದ್ರ ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *