2,960 ಜನರಿಗೆ ಪಾಸಿಟಿವ್, 35 ಬಲಿ- 2,701 ಮಂದಿ ಡಿಸ್ಚಾರ್ಜ್

ಬೆಂಗಳೂರು: ಇಂದು ಕರ್ನಾಟಕದಲ್ಲಿ 2,960 ಮಂದಿಗೆ ಸೋಂಕು ಬಂದಿದ್ದು, 2,701 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 35 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,97,204ಕ್ಕೇರಿದೆ. ಇಂದು 27,098 ಮಂದಿಗೆ ಆಂಟಿಜನ್ ಟೆಸ್ಟ್, 83,039 ಮಂದಿಗೆ ಆರ್.ಟಿ.ಪಿ.ಸಿ.ಆರ್ ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,10,137 ಜನರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 85,14,653 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ 1,568 ಮಂದಿಗೆ, ಮಂಡ್ಯ 119, ತುಮಕೂರು 161, ಮೈಸೂರು 148, ಹಾಸನದಲ್ಲಿ 97, ದಕ್ಷಿಣ ಕನ್ನಡದಲ್ಲಿ 79 ಮಂದಿಗೆ ಸೋಂಕು ಬಂದಿದೆ. ಬೆಂಗಳೂರು ನಗರದಲ್ಲಿ 473, ಬಳ್ಳಾರಿ 39, ತುಮಕೂರು 34, ಮೈಸೂರಿನಲ್ಲಿ 35, ಕೋಲಾರ 28, ಕಲಬುರಗಿ 30, ಹಾಸನ 27 ಮಂದಿ ಸೇರಿದಂತೆ ರಾಜ್ಯದಲ್ಲಿ 901 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments

Leave a Reply

Your email address will not be published. Required fields are marked *