ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ – ಮೂವರು ಹುತಾತ್ಮ, 14 ಜನರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು ಶ್ರೀನಗರ ಬಳಿ ಪೊಲೀಸ್ ಬಸ್ ಮೇಲೆ ದಾಳಿ ನಡೆಸಿದ್ದಾರೆ. ಪರಿಣಾಮ ಮೂವರು  ಹುತಾತ್ಮರಾಗಿದ್ದು, 14 ಮಂದಿ ಭದ್ರತಾ ಸಿಬ್ಬಂದಿಗೆ ಗಾಯವಾಗಿದೆ.

ಇಂದು ಸಂಜೆ ಶ್ರೀನಗರದ ಹೊರವಲಯದಲ್ಲಿರುವ ಜೆವಾನ್‍ನಲ್ಲಿರುವ ಪೊಲೀಸ್ ಶಿಬಿರದ ಬಳಿ ಇಬ್ಬರು ಭಯೋತ್ಪಾದಕರು ಪೊಲೀಸ್ ಬಸ್ ಮೇಲೆ ದಾಳಿ ಮಾಡಿದ್ದಾರೆ. ಈ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಮೂವರು ಸಶಸ್ತ್ರ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

ವಿವಿಧ ಭದ್ರತಾ ಪಡೆಗಳ ಹಲವಾರು ಶಿಬಿರಗಳನ್ನು ಹೊಂದಿರುವ ಅತ್ಯಂತ ಸುರಕ್ಷಿತ ಪ್ರದೇಶದಲ್ಲಿ ಭಯೋತ್ಪಾದಕರು ಬಸ್ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.

ಶ್ರೀನಗರದ ಪಂಥಾ ಚೌಕ್ ಪ್ರದೇಶದ ಜೆವಾನ್ ಬಳಿ ಈ ದಾಳಿ ನಡೆದಿದೆ. ಉಗ್ರರ ಪತ್ತೆಗೆ ಶೋಧ ಕಾರ್ಯವನ್ನು ಆರಂಭಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ ಉಸ್ತುವಾರಿ ಬದಲಾಗದಿದ್ದರೆ ಜನವರಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ: ಸೋಮಶೇಖರ್ ರೆಡ್ಡಿ

ಜಮ್ಮು-ಕಾಶ್ಮೀರದ ಪೊಲೀಸರು ಟ್ವೀಟ್ ಮಾಡುವ ಮೂಲಕ ಈ ಕುರಿತು ಮಾಹಿತಿಯನ್ನು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *