ಅಡುಗೆ ಸಿಲಿಂಡರ್ ಸ್ಫೋಟ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂವರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ ಮೂಲದ ನಾಲ್ವರು ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಮೂವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಮಂಗಳವಾರ ಸಂಜೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *