ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಹಾಸನ: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು (Soldiers) ಅಸ್ವಸ್ಥಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.

ಕುಡುಗರಹಳ್ಳಿ ಬಳಿಯ ಕ್ಯಾಂಪ್‌ನಲ್ಲಿ ಘಟನೆ ನಡೆದಿದ್ದು, ಚಾಲನಾ ತರಬೇತಿಗೆಂದು ಬಂದಿದ್ದ ಸೈನಿಕರು ಕುಡುಗರಹಳ್ಳಿ ಬಳಿ ಕ್ಯಾಂಪ್ ಹಾಕಿದ್ದರು. ಬುಧವಾರ ಮಧ್ಯಾಹ್ನ ಕ್ಯಾಂಪ್‌ನಲ್ಲಿ ತಯಾರಾಗಿದ್ದ ಆಹಾರವನ್ನು ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಿಲಿಟರಿ ವಾಹನಗಳಲ್ಲಿ ಕರೆತಂದು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಅಣ್ಣನ ಜೊತೆಗೆ ಐಸ್‌ಕ್ರೀಮ್‌ ತೆಗೆದುಕೊಂಡು ಬರುವಾಗ ಅಪಘಾತ – ಬಾಲಕ ಸಾವು

ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ. ಅಸ್ವಸ್ಥಗೊಂಡಿರುವ ಸೈನಿಕರು ಚೇತರಿಸಿಕೊಳ್ಳುತ್ತಿದ್ದು, ಫುಡ್ ಪಾಯ್ಸನ್‌ನಿಂದ ಅಸ್ವಸ್ಥಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ