ಭೋಪಾಲ್: ಒಂದೇ ಸಿರಿಂಜ್‍ನಲ್ಲಿ 39 ಮಕ್ಕಳಿಗೆ ಕೊರೊನಾ ಲಸಿಕೆಯನ್ನು ನೀಡಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.
ನಗರದ ಜೈನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮೆಗಾ ಲಸಿಕೆ ಅಭಿಯಾನದ ವೇಳೆ ಈ ಘಟನೆ ನಡೆದಿದೆ. ವೈದ್ಯನೊಬ್ಬ ವಿದ್ಯಾರ್ಥಿಗಳಿಗೆಲ್ಲರಿಗೂ ಒಂದೇ ಸಿರಿಂಜ್ ಬಳಸಿ ಲಸಿಕೆ ಹಾಕುತ್ತಿದ್ದನ್ನು ಗಮನಿಸಿದರು. ಈ ರೀತಿಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಪೋಷಕರು ಪ್ರತಿಭಟನೆಯನ್ನು ನಡೆಸಿದರು. ತೀವ್ರವಾದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಜಿತೇಂದ್ರ ಅಹಿರ್ವಾರ್ ಎಂಬವರ ವಿರುದ್ಧ ಎಫ್‍ಐಆರ್ ದಾಖಲಿಸಲಾಯಿತು. 9 ರಿಂದ 12ನೇ ತರಗತಿ ವರೆಗೆ ಓದುತ್ತಿರುವ 39 ಮಕ್ಕಳಿಗೆ ಈ ಸಿರಿಂಜ್‍ನ್ನು ಬಳಸಲಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಪತ್ನಿಗೆ ಟಿಕೆಟ್ ಕೊಡಿ – ಬಿಜೆಪಿ ಕಾರ್ಯಕರ್ತರ ಹೊಸ ಬೇಡಿಕೆ

ಘಟನೆಗೆ ಸಂಬಂಧಿಸಿದಂತೆ ಸಾಗರ್‌ನ ಉಸ್ತುವಾರಿ ಜಿಲ್ಲಾಧಿಕಾರಿ ಕ್ಷಿತಿಜ್ ಸಿಂಘಾಲ್ ಅವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಆರೋಪಿ ಜಿತೇಂದ್ರ ಅಹಿರ್ವಾರ್ ಸ್ಥಳದಿಂದ ಪರಾರಿಯಾಗಿದ್ದು, ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾರ್ಥ ಚಟರ್ಜಿಯನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ಮಮತಾ ಬ್ಯಾನರ್ಜಿ

Leave a Reply