ಜಮ್ಮು ಕಾಶ್ಮೀರ | ಕಥುವಾದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ – ನಾಲ್ವರು ಸಾವು

– ರೈಲು ಹಳಿ, ಹೆದ್ದಾರಿಗಳಿಗೆ ಭಾರೀ ಹಾನಿ
– 4 ದಿನಗಳ ಅಂತರದಲ್ಲಿ 2 ಬಾರಿ ಮೇಘಸ್ಫೋಟ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಮೇಘಸ್ಫೋಟದಿಂದ (Kathua Cloudburst) ಉಂಟಾದ ಹಠಾತ್‌ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ (Jammu Kashmir) ಕಿಶ್ತ್ವಾರ ಜಿಲ್ಲೆಯ ಚಶೋತಿಯಲ್ಲಿ ಉಂಟಾದ ಮೇಘಸ್ಫೋಟದಿಂದ ಜನ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ಚಶೋತಿ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಉಂಟಾದ ಮೇಘಸ್ಫೋಟದಿಂದ 60 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ನಾಪತ್ತೆಯಾದವರಿಗಾಗಿ ಕಳೆದ ನಾಲ್ಕು ದಿನಗಳಿಂದಲೂ ಇಲ್ಲಿ ಶೋಧಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಕಥುವಾದಲ್ಲೂ ಪ್ರವಾಹ (Kathua Flood) ಸಂಭವಿಸಿದೆ. ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

ಈ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಸಂಸದ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ (Jitendra Singh) ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮೇಘಸ್ಫೋಟದಿಂದ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ -44 ಮತ್ತು ಪೊಲೀಸ್ ಠಾಣೆಗೆ ಹಾನಿಯಾಗಿದೆ. ನಾಗರಿಕ ಆಡಳಿತ, ಮಿಲಿಟರಿ ಮತ್ತು ಅರೆಸೇನಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ ಮೇಘಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?