ಕೋವಿಡ್‍ನಿಂದ 41 ಗರ್ಭಿಣಿಯರು ಸಾವು, 149 ಮಂದಿ ಆತ್ಮಹತ್ಯೆ- ಕೇರಳ ಆರೋಗ್ಯ ಸಚಿವೆ

VEENA JEORGE

ತಿರುವನಂತಪುರಂ: ಕೋವಿಡ್‍ನಿಂದಾಗಿ ಕೇರಳ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷಗಳ ಅವಧಿಯಲ್ಲಿ 41 ಗರ್ಭಿಣಿಯರು ಮೃತಪಟ್ಟಿದ್ದಾರೆ. ಅಲ್ಲದೇ ಕೊರೊನಾ ಸೋಂಕಿಗೆ ಒಳಗಾಗಿ ಸಂಕಷ್ಟ ಅನುಭವಿಸಿದ 149 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

PREGNANT

ಕೇರಳ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶಾಸಕ ಟಿ.ಜೆ.ವಿನೋದ್ ಅವರ ಪ್ರಶ್ನೆಗೆ ಆರೋಗ್ಯ ಸಚಿವೆ ಬುಧವಾರ ಉತ್ತರಿಸಿದರು. ಈ ಮಾಹಿತಿಯು ಆಯಾ ಜಿಲ್ಲೆಗಳಿಂದ ಸಂಗ್ರಹಿಸಿದ ವರದಿಯನ್ನು ಆಧರಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಕೇಸ್‌ ಹೆಚ್ಚಳ- ಪಶ್ಚಿಮ ಬಂಗಾಳದಲ್ಲಿ ಲಾಕ್‍ಡೌನ್ ಜಾರಿ

ಮ್ಯಾಥ್ಯೂ ಕುಜಲನಾಡನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯ ಆರೋಗ್ಯ ಇಲಾಖೆ ನಡೆಸಿದ ವೈಜ್ಞಾನಿಕ ಅಧ್ಯಯನ ಹಾಗೂ ಉನ್ನತ ವೈದ್ಯಕೀಯ ಸಂಸ್ಥೆ ಐಸಿಎಂಆರ್ ಸಮೀಕ್ಷೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

COVID

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವರದಿ ಪ್ರಕಾರ, ಕೇರಳ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 0.88 ಇದೆ. 2020ರ ಮೇ, ಆಗಸ್ಟ್ ಮತ್ತು ಡಿಸೆಂಬರ್ ಅವಧಿಯಲ್ಲಿ ಶೇ. 11.6 ಇತ್ತು. 2021ರ ಮೇ ನಲ್ಲಿ ಪಾಸಿಟಿವಿಟಿ ದರ ಶೇ. 44.4 ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾರ್ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ – ವೀಡಿಯೋ ವೈರಲ್

“ಈ ವರ್ಷದ ಆಗಸ್ಟ್, ಸೆಪ್ಟೆಂಬರ್‍ನಲ್ಲಿ ನಡೆಸಿದ ಸಿರೊ ಅಧ್ಯಯನದಲ್ಲಿ ಪಾಸಿಟಿವಿಟಿ ದರ ಶೇ. 82.61ರಷ್ಟು ಏರಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಕೋವಿಡ್ ಲಸಿಕೆಯಲ್ಲಿನ ಪ್ರಗತಿ ಹಾಗೂ ಜನರ ಜೀವನಶೈಲಿಯೇ ಇದಕ್ಕೆ ಕಾರಣ ಎನ್ನಬಹುದು” ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *