ಹೈದರಾಬಾದ್: ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ 43 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ತರಗತಿಗಳನ್ನು ಅಮಾನತುಗೊಳಿಸುವಂತೆ ಮತ್ತು ಕ್ಯಾಂಪಸ್ ಅನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

ಒಂದು ವಾರದ ಹಿಂದೆಯಷ್ಟೇ ಕಾಲೇಜಿನಲ್ಲಿ ವಾರ್ಷಿಕೋತ್ಸವವನ್ನು ನಡೆಸಲಾಗಿತ್ತು. ಇದರಿಂದಾಗಿ ವೈರಸ್ ಹರಡಿರಬಹುದಾಗಿದೆ. ಈ ಕುರಿತಂತೆ ಮಾತನಾಡಿದ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ ಅವರು, ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಇಷ್ಟು ಜನ ಪಾಲ್ಗೊಳ್ಳುತ್ತಿರುವುದರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಲಾಗಿಲ್ಲ ಮತ್ತು ಸಮಾರಂಭದಲ್ಲಿ ಹಲವಾರು ಮಂದಿ ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ತಂಡಕ್ಕೆ ಗೆಲುವಿನ ಶ್ರೇಯಸ್ಸು ದೊರೆಯಬೇಕು: ರಾಹುಲ್ ದ್ರಾವಿಡ್

ಇಲ್ಲಿಯವರೆಗೂ ಸುಮಾರು 200 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಮವಾರ, ಕ್ಯಾಂಪಸ್ನಲ್ಲಿರುವ 1,000 ಜನರನ್ನು ಪರೀಕ್ಷಿಸಲು ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಶನಿವಾರ 13 ವಿದ್ಯಾರ್ಥಿಗಳಲ್ಲಿ ಕೊರೊನಾ ಧೃಡಪಟ್ಟಿದ್ದು, ಭಾನುವಾರ 26 ವಿದ್ಯಾರ್ಥಿಗಳಿಗೆ ಕೊರೊನಾ ಧೃಡಪಟ್ಟಿದೆ. ಇದೀಗ ಸಂಪೂರ್ಣ ಕಾಲೇಜನ್ನು ಸ್ಯಾನಿಟೈಸ್ ಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೀದರ್ನಲ್ಲಿ ಕುದುರೆ ವ್ಯಾಪಾರ ಜೋರು

ಮತ್ತೊಂದೆಡೆ ತೆಲಂಗಾಣದ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ ಜಿ ಶ್ರೀನಿವಾಸ್ ಅವರು, ಜನವರಿ ಹಾಗೂ ಫೆಬ್ರವರಿ ಮಧ್ಯದ ವೇಳೆಗೆ ಹೆಚ್ಚಿನ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ. ಓಮಿಕ್ರಾನ್ ಡೆಲ್ಟಾಕ್ಕಿಂತ ಆರು ಪಟ್ಟು ಶರ ವೇಗವಾಗಿ ಹರಡುತ್ತದೆ ಎಂದು ಸೂಚಿಸಿದ್ದಾರೆ.

Leave a Reply