ಒಟ್ಟು 45 ಪಾಸಿಟಿವ್ – ಬೆಂಗಳೂರು ಹೊರತುಪಡಿಸಿ 3 ಜಿಲ್ಲೆಗಳಲ್ಲಿ ಒಂದೊಂದು ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 45 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಕೂಡಾ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿದೆ.

ಬೆಂಗಳೂರು ನಗರದಲ್ಲಿ ಇಂದು 42 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಇಂದು ಕೂಡ ಮರಣ ಪ್ರಮಾಣ ಶೇ.0.00 ಮುಂದುವರಿದಿದೆ. ಪಾಸಿಟಿವಿಟಿ ರೇಟ್ ಶೇ.0.56 ಇದ್ದು, ಇಂದು 54 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,429 ಇದ್ದು, ಇಲ್ಲಿ ವರೆಗೆ 40,057 ಮರಣ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 6,57,34,990 ಮಂದಿಗೆ ಕೊರೊನಾ ಬಂದಿದ್ದು, ಒಟ್ಟು 39,04,693 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಶಾಂಘೈ ಜನ – ಸಾಕು ಪ್ರಾಣಿಗಳ ಮಾರಣಹೋಮ

ರಾಜ್ಯದಲ್ಲಿ ಇಂದು ಒಟ್ಟು 21,838 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಒಟ್ಟು 10,119 ಸ್ಯಾಂಪಲ್(ಆರ್‌ಟಿಪಿಸಿಆರ್ 7539+2580 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್‌ ರಾಜೀನಾಮೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 42, ಬಾಗಲಕೋಟೆ 1, ಕಲಬುರಗಿ 1 ಹಾಗೂ ಮೈಸೂರು 1 ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಉಳಿದ 26 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿದೆ.

Comments

Leave a Reply

Your email address will not be published. Required fields are marked *