ಚಾಮರಾಜನಗರ: ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಹಾರಿದ ಬಾಲ್ಸ್ ಗಳು ತಗುಲಿ ಐವರು ಬಾಲಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರವೀಣ್, ದರ್ಶನ್, ಸುಜೀತ್, ಸಿದ್ದಾರ್ಥ್ ಮತ್ತು ರಘುವೀರ್ ತಲೆಗೆ ಬಾಲ್ಸ್ ಬಿದ್ದ ಪರಿಣಾಮ ಗಾಯಗೊಂಡಿದ್ದಾರೆ. ತಕ್ಷಣವೇ ಬಾಲಕರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಮಧುವನಹಳ್ಳಿಯಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಆನೆಯನ್ನು ವೀಕ್ಷಣೆ ಮಾಡಲು ಬಾಲಕರು ಮರ ಹತ್ತಿದ್ದ ವೇಳೆ ಘಟನೆ ನಡೆದಿದೆ. ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಬಾಲಕರಿಗೆ ಗುಂಡಿನ ಬಾಲ್ಸ್ ತಗುಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply