ಮುಂಬೈ| ರೈಲಿನಿಂದ ಹಳಿಗೆ ಬಿದ್ದು ಐವರು ಸಾವು

ಮುಂಬೈ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನಿಂದ ಹಳಿ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿರುವ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ 3.0 ಸರ್ಕಾರಕ್ಕೆ ಒಂದು ವರ್ಷ

ರೈಲಿನೊಳಗಿನ ಅತಿಯಾದ ಜನಸಂದಣಿಯಿಂದಾಗಿ ಜನರು ಒಂದು ಬೋಗಿಯಿಂದ ಕೆಳಗೆ ಬೀಳಲು ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಜನದಟ್ಟಣೆಯಿಂದಾಗಿ ಪ್ರಯಾಣಿಕರು ರೈಲಿನ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ್ದಾರೆಂದು ತಿಳಿದುಬಂದಿದೆ.

ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್