ಪಟಾಕಿ ಅಂಗಡಿಯಲ್ಲಿ ಸ್ಫೋಟ- ದೀಪಾವಳಿಗೆ ಖರೀದಿಸಲು ಬಂದಿದ್ದ ಐವರು ಸಾವು!

FIREWORKS ACCIDENT

ಚೆನ್ನೈ: ತಮಿಳುನಾಡಿನ ಕಲ್ಲಕುರುಚಿ ಜಿಲ್ಲೆಯ ಶಂಕರಪುರಂನಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

FIREWORKS

ಸ್ಫೋಟದಿಂದ ಉಂಟಾದ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹೊತ್ತಿಕೊಂಡಿದೆ. ಈ ವೇಳೆ ಸಿಲಿಂಡರ್ ಅಂಗಡಿಯಲ್ಲಿ ಸಿಲಿಂಡರ್‍ಗಳೂ ಸ್ಫೋಟಗೊಂಡಿವೆ.

ದೀಪಾವಳಿ ಹಬ್ಬ ಸಮೀಪಿಸಿದ್ದು, ಜನರು ಪಟಾಕಿ ಹಾಗೂ ಅಗತ್ಯ ವಸ್ತುಗಳನ್ನು ಖರೀದಿಸಲು ಅಂಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಘಟನೆಯಲ್ಲಿ ಸುಟ್ಟಗಾಯಗಳಿಂದ ನರಳುತ್ತಿದ್ದ 10ಕ್ಕೂ ಹೆಚ್ಚು ಮಂದಿಯನ್ನು ಕಲ್ಲಕುರುಚಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡದಿಂದಾಗಿ ಈ ಪ್ರದೇಶದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಹತ್ತಿರ ಬರ್ತಿದ್ದಂತೆ ಪುಂಡಾಟಿಕೆ ಶುರು – MES ವಿರುದ್ಧ ಹೆಚ್‍ಡಿಕೆ ಕಿಡಿ

ಕಲ್ಲಕುರುಚಿ ಹಾಗೂ ತಿರುಕೊಯ್ಲೂರ್‍ನ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಪಟಾಕಿ ಅಂಗಡಿ ಹಾಗೂ ಪಕ್ಕದ ಅಂಗಡಿಗಳಲ್ಲಿದ್ದ ಕಾರ್ಮಿಕರು, ಅಂಗಡಿಗಳಿಗೆ ಬಂದಿದ್ದವರು ಎಲ್ಲಿಯವರು ಎಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

FIREWORKS

ಪಟಾಕಿ ಸ್ಫೋಟ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Comments

Leave a Reply

Your email address will not be published. Required fields are marked *