ಬೀದರ್: ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೀದರ್‍ನ ಜೀವನಾಡಿ ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು 5050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

7.69 ಟಿಎಂಸಿ ಸಾಮರ್ಥ್ಯವಿರುವ ಕಾರಂಜಾ ಜಲಾಶಯದಲ್ಲಿ ಸದ್ಯ 7.24 ಟಿಎಂಸಿ ನೀರು ಸಂಗ್ರಹವಾಗಿದೆ. ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದಂತೆ ಜಲಾಶಯಕ್ಕೆ ಯಾವುದೇ ಅಪಾಯವಾಗಬಾರದು ಎಂದು ಅಧಿಕಾರಿಗಳು ಇಂದು 5050 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಇದನ್ನೂ ಓದಿ:ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ: ಕಾಶಪ್ಪನವರ್

ಜಲಾಶಯದ 4 ಗೇಟ್‍ಗಳ ಮೂಲಕ 5050 ಕ್ಯೂಸೆಕ್ ನೀರು ಕಾರಂಜಾ ಜಲಾಶಯದಿಂದ ಬಿಡುಗಡೆ ಮಾಡಲಾಗಿದ್ದು, ಭಾಲ್ಕಿ ತಾಲೂಕಿನ 30ಕ್ಕೂ ಹೆಚ್ಚು ಹಳ್ಳಿಗಳ ಜನರಿಗೆ ನಾಲೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ
ಕಾರಂಜಾ ಹಿನ್ನೀರಿನ ಪ್ರದೇಶದಲ್ಲಿ ನಾಲ್ಕು ದಿನಗಳಿಂದ ಧಾರಾಕಾರವಾಗಿ ಭಾರಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕಾರಂಜಾ ಹಿನ್ನೀರು ಪ್ರದೇಶದಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

Leave a Reply