54 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: 54 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗಳಿಗೆ ಬೀದರ್‍ನಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ ಕೊಟ್ಟಿದ್ದಾರೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಯೋಜನೆಯಲ್ಲಿ ಸುಮಾರು 54 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆಚಾಲನೆ ನೀಡಿದರು. ಗ್ರಾಮದ ಮೈನೋದ್ಧೀನ್ ಕಟಲೇರಿ ಮನೆಯಿಂದ ಶೆಟಕಾರ ಶಾಲೆವರೆಗೆ, ಮಸ್ತಾನ ಭಗವಾನ ಮನೆಯಿಂದ ಗೋರಮಿಯಾ ಮನೆಯವರೆಗೆ ಹಾಗೂ ಅನೇಕ ಕಡೆಗಳಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಇಂದು ಚಾಲನೆ ನೀಡಿದರು. ಇದನ್ನೂ ಓದಿ:  ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ: ವೇದವ್ಯಾಸ ಕಾಮತ್

ಬಳಿಕ ಮಾತನಾಡಿದ ಅವರು, ನಿಗದಿತ ಸಮಯದಲ್ಲೇ ಉತ್ತಮ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಾಡಬೇಕು. ಕಾಮಗಾರಿಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗಬಾರದು. ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಬಾರದಂತೆ ಗುಣಮಟ್ಟದ ಕೆಲಸ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ:  ಹೋರಿಯ ಹುಟ್ಟು ಹಬ್ಬ ಆಚರಿಸಿದ ಶಾಸಕ ರೇಣುಕಾಚಾರ್ಯ

ಈ ಸಂದರ್ಭದಲ್ಲಿ ಮುಖಂಡರಾದ ಸಂತೋಷ ರಾಸೂರು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಭಾಗ್ಯಜ್ಯೋತಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಗುಂಡಮ್ಮ ಸುಭಾಸ್ ನಾಟೀಕರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Comments

Leave a Reply

Your email address will not be published. Required fields are marked *