ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಬರುವ ಎರಡು ಮೂರು ದಿನಗಳಲ್ಲಿ ಆಕ್ಸಿಜನ್ ಪ್ರೊಡಕ್ಷನ್ ಪ್ರಾರಂಭವಾಗಲಿದೆ. ಇದರಿಂದಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಬರುವಂತಹ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ಇಲ್ಲದಂತೆ ಇದು ಉತ್ಪಾದನೆ ಮಾಡಲಿದೆ. ಮೂರನೇ ಅಲೆ ಬರುವ ಬಗ್ಗೆ ತಜ್ಞ ವೈದ್ಯರು ತಿಳಿಸಿರುವಂತೆ ಮೂರನೇ ಅಲೆಯನ್ನು ಕೂಡ ಸಮರ್ಥವಾಗಿ ಎದುರಿಸಲು ಅಥಣಿಯಲ್ಲಿ ಪೂರ್ವಸಿದ್ಧತೆ ಮಾಡಿಕೊಂಡಿರುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ತಿಳಿಸಿದರು.

Leave a Reply