10 ದಿನಗಳಲ್ಲಿ 3ನೇ ಅವಘಡ: ಹಳಿ ತಪ್ಪಿದ ದುರಂತೊ ಎಕ್ಸ್ ಪ್ರೆಸ್!

ಮುಂಬೈ: ನಾಗ್ಪುರದಿಂದ ಮುಂಬೈಗೆ ಬರುತ್ತಿದ್ದ ದುರಂತೊ ಎಕ್ಸ್ ಪ್ರೆಸ್ ಥಾಣೆಯ ಟಿಟಿವಾಲಾ ನಿಲ್ದಾಣದ ಬಳಿ ಇಂದು ಬೆಳಗ್ಗೆ ಹಳಿ ತಪ್ಪಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

ದುರಂತೊ ಎಕ್ಸ್ ಪ್ರೆಸ್‍ನ ಒಟ್ಟು 7 ಎಸಿ ಬೋಗಿಗಳು ಹಳಿ ತಪ್ಪಿದ್ದು, ರೈಲಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗುತ್ತಿದೆ. ಇಂದು ಬೆಳಗಿನ ಜಾವದಿಂದ ಘಟನಾ ಸ್ಥಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಘಟನೆಯಿಂದ ಇದೂವರೆಗೂ ಯಾವುದೇ ಸಾವು-ನೋವುಗಳ ಬಗ್ಗೆ ದಾಖಲಾಗಿಲ್ಲ. ಇನ್ನು ರೈಲಿನ ಕೆಲವು ಬೋಗಿಗಳಲ್ಲಿರುವ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

10 ದಿನಗಳಲ್ಲಿ 3ನೇ ಅಪಘಾತ: ಇದು ಆಗಸ್ಟ್ ತಿಂಗಳಲ್ಲಿ ನಡೆಯುತ್ತಿರುವ ಮೂರನೇ ರೈಲು ಅಪಘಾತವಾಗಿದೆ. ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರದ ಬಳಿ ಉತ್ಕಲ್ ಎಕ್ಸ್ ಪ್ರೆಸ್ ಹಳಿ ತಪ್ಪಿ ಕಾಲೇಜಿಗೆ ನುಗ್ಗಿತ್ತು. ಈ ಅಪಘಾತದಲ್ಲಿ 23 ಜನರು ಸಾವನ್ನಪ್ಪಿದ್ದು, 97 ಜನರು ಗಾಯಗೊಂಡಿದ್ದರು. ಇದಾದ ಬಳಿಕ ಅಝಮ್ಘಡ್ ದಿಂದ ನವದೆಹಲಿಗೆ ತೆರಳುತ್ತಿದ್ದ ಕೈಫಿಯತ್ ಎಕ್ಸ್ ಪ್ರೆಸ್ ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ರೈಜಿನ ಇಂಜಿನ್ ಡಂಪರ್ ಗೆ ಡಿಕ್ಕಿಯಾಗಿದೆ. ಪರಿಣಾಮ 74 ಮಂದಿ ಗಾಯಗೊಂಡಿದ್ದರು.

Comments

Leave a Reply

Your email address will not be published. Required fields are marked *