Telangana| 7 ಮಂದಿ ಮಾವೋವಾದಿಗಳ ಎನ್‌ಕೌಂಟರ್‌

ಹೈದರಾಬಾದ್: ತೆಲಂಗಾಣದ (Telangana) ಮುಲುಗು (Mulugu) ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಪೊಲೀಸರು ಹಾಗೂ ಮಾವೋವಾದಿಗಳ (Maoists) ಮಧ್ಯೆ ನಡೆದ ಎನ್‌ಕೌಂಟರ್‌ನಲ್ಲಿ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.

ಮುಂಜಾನೆ 5:30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ ಶರಣಾಗುವಂತೆ ಆದೇಶಿಸಿತ್ತು. ಈ ಸಂದರ್ಭ ಮಾವೋವಾದಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ಸುರಿಮಳೆ ಸುರಿಸಿದ್ದಾರೆ. ಪರಿಣಾಮ 7 ಮಂದಿ ಮಾವೋವಾದಿಗಳು ಹತರಾಗಿದ್ದಾರೆ. ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

ಘಟನಾ ಸ್ಥಳದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಎರಡು ಎಕೆ 47 ರೈಫಲ್‌ಗಳು ಸೇರಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದವರಲ್ಲಿ ಒಬ್ಬನನ್ನು ನಿಷೇಧಿತ ಸಿಪಿಐ (ಮಾವೋವಾದಿ) ತೆಲಂಗಾಣ ರಾಜ್ಯ ಸಮಿತಿಯ (ಯೆಲ್ಲಾಂಡು ನರಸಂಪೇಟ್) ಕಾರ್ಯದರ್ಶಿ ಕುರ್ಸಮ್ ಮಂಗು ಅಲಿಯಾಸ್ ಭದ್ರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕರುನಾಡಿಗೆ ಮತ್ತೊಂದು ಗರಿ: ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ವಿಜಯಪುರದ ಸಮೈರಾ

ನವೆಂಬರ್ 21ರಂದು ಪೊಲೀಸ್ ಮಾಹಿತಿದಾರರೆಂದು ಶಂಕಿಸಿ ಮಾವೋವಾದಿಗಳು ಇಬ್ಬರು ಬುಡಕಟ್ಟು ಜನರನ್ನು ಹತ್ಯೆಗೈದಿದ್ದರು. ಈ ಹಿನ್ನೆಲೆ ತೆಲಂಗಾಣ ಪೊಲೀಸ್ ಹಾಗೂ ನಕ್ಸಲ್ ವಿರೋಧಿ ಪಡೆಗಳು ಜಂಟಿಯಾಗಿ ಎಟುರ್ನಗರಂನ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಇದನ್ನೂ ಓದಿ: ಎಫ್‌ಬಿಐ ನಿರ್ದೇಶಕನಾಗಿ ಭಾರತೀಯ ಮೂಲದ ಕಶ್ಯಪ್‌ ನಾಮನಿರ್ದೇಶನ