ಗೋವಾದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – ಇಂದು 8 ʼಕೈʼ ಶಾಸಕರು ಬಿಜೆಪಿ ಸೇರ್ಪಡೆ

ಪಣಜಿ: ಗೋವಾದಲ್ಲಿ (Goa) ಕಾಂಗ್ರೆಸ್‌ಗೆ (Congress) ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್‌ನ 11 ಶಾಸಕರ ಪೈಕಿ 8 ಮಂದಿ ವಿಧಾನಸಭಾ ಸ್ಪೀಕರ್‌ ಅವರನ್ನು ಭೇಟಿಯಾಗಿದ್ದು, ಬಿಜೆಪಿ (BJP) ಸೇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್‌ ಶಾಸಕರು ಪಕ್ಷಾಂತರವಾಗುವ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್‌ ಶಾಸಕರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್‌ ತನವಾಡೆ ಹೇಳಿದ್ದರು. ಇದನ್ನೂ ಓದಿ: ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ

bjp - congress

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿ ಎಂಟು ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತನವಡೆ ಮಾಹಿತಿ ನೀಡಿದ್ದರು.

ಗೋವಾದಲ್ಲಿ ಕಾಂಗ್ರೆಸ್‌ 11 ಮಂದಿ ಶಾಸಕರ ಬಲ ಹೊಂದಿತ್ತು. ಎಂಟು ಮಂದಿ ಶಾಸಕರ ವಲಸೆಯಿಂದ ಈ ಸಂಖ್ಯೆ ಮೂರಕ್ಕೆ ಕುಸಿಯುವ ಭೀತಿ ಕಾಂಗ್ರೆಸ್‌ಗೆ ಎದುರಾಗಿದೆ. ಇದನ್ನೂ ಓದಿ: ಸೈರಸ್‌ ಮಿಸ್ತ್ರಿ ಸಾವು ಪ್ರಕರಣ – ಅಪಘಾತಕ್ಕೀಡಾದ ಕಾರು ಪರಿಶೀಲಿಸಲು ಹಾಂಗ್‌ ಕಾಂಗ್‌ನಿಂದ ಬಂದ ಮರ್ಸಿಡಿಸ್ ತಜ್ಞರು

ದಿಗಂಬರ್‌ ಕಾಮತ್, ಮೈಕೆಲ್ ಲೋಬೋ, ಡೆಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರಡಾಲ್ಫ್ ಫೆರ್ನಾಂಡಿಸ್ ಇಂದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಇವರು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ (Pramod Sawant) ಅವರನ್ನು ಭೇಟಿಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *