ವಿಮ್ಸ್‌ನಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆ – ಐಸಿಯುವಿನಲ್ಲಿದ್ದ 8ರ ಬಾಲಕ ಸಾವು

ಬಳ್ಳಾರಿ: ಜಿಲ್ಲೆಯ ವಿಮ್ಸ್ ಆಸ್ಪತ್ರೆಯಲ್ಲಿ(Vims Hospital) ಸಾವಿನ ಸರಣಿ ಮುಂದುವರಿದಿದ್ದು, ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ICU) ದಾಖಲಾಗಿದ್ದ 8 ವರ್ಷದ ಬಾಲಕನೋರ್ವ(Boy) ಕೂಡ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾನೆ. ನಿಖಿಲ್ (8) ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: 8 ವರ್ಷದ ಬಳಿಕ ಗೊತ್ತಾಯ್ತು ತನ್ನ ಪತಿ ಅವನಲ್ಲ ಅವಳು – ಗಂಡನ ಲಿಂಗ ಬದಲಾವಣೆ ತಿಳಿದು ಮಹಿಳೆ ಶಾಕ್

ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ ಪುತ್ರ ನಿಖಿಲ್ (Nikil) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಸೆಪ್ಟೆಂಬರ್ 11 ರಂದು ನಿಖಿಲ್‍ನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ಜ್ವರಕ್ಕೆ (Dengue Fever) ಸಂಬಂಧಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವುಗಳ ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಈ ವಿಚಾರ ಗುರುವಾರ ಸಂಜೆ ವೇಳೆಗೆ ಬಹಿರಂಗವಾಗಿದೆ. ಇದನ್ನೂ ಓದಿ: ಮೊಬೈಲ್ ಕದಿಯಲು ಹೋಗಿ ಕಳ್ಳನ ಫಜೀತಿ – 10 ಕಿ.ಮೀ ಕಿಟಕಿಯಲ್ಲಿ ಜೋತಾಡ್ಕೊಂಡು ಬಂದ

ಈ ವಿಚಾರವಾಗಿ ಮೃತ ಬಾಲಕನ ತಾಯಿ ಈರಮ್ಮ (Hiramma) ಅವರು ಮಾತನಾಡಿದ್ದು, ನನ್ನ ಮಗನನ್ನು ಐಸಿಯುನಲ್ಲಿ ಅಡ್ಮಿಟ್ ಮಾಡಿದ್ದೇವು. ವೆಂಟಿಲೇಟರ್‍ನಿಂದಲೇ ನನ್ನ ಮಗ ಉಸಿರಾಡುತ್ತಿದ್ದ. ಆದರೆ ಬುಧವಾರ ಬೆಳಗ್ಗೆ ಕರೆಂಟ್ (Electricity Cut) ಹೋದಾಗ ಮಶೀನ್‍ಗಳೆಲ್ಲ ಬಂದ್ ಆದವು. ಈ ರೀತಿ ಯಾಕಾಗಿದೆ ಎಂದು ಅಲ್ಲಿದ್ದ ಸಿಬ್ಬಂದಿಯನ್ನು ಕೇಳಿದೆವು. ಅವರು ಕರೆಂಟ್ ಹೋಗಿದೆ ಎಂದರು. ಹೀಗೆ ಹೇಳಿದ ಕೆಲವೇ ಕ್ಷಣಗಳಲ್ಲಿ ನನ್ನ ಮಗ ಸತ್ತು ಹೋದ ಎಂದು ಆರೋಪಿಸಿದ್ದಾರೆ.

ಈ ಮೂಲಕ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಬುಧವಾರ ರಾತ್ರಿ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಟ್ ಆಗಿದೆ. ಬೆಳಗ್ಗೆವರೆಗೂ ಕರೆಂಟ್ ಬಂದಿಲ್ಲ. ಇದರಿಂದ ಐಸಿಯುನಲ್ಲಿ ದಾಖಲಾಗಿದ್ದ ಬಳ್ಳಾರಿಯ(Bellari) ಚೆಟ್ಟೆಮ್ಮಾ, ಹುಸೇನ್, ಚಂದ್ರಮ್ಮ ಹಾಗೂ ಮನೋಜ್ ಸಾವಿಗೀಡಾಗಿದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *