ತಮಿಳಿನ ಈ ಹೀರೋಗೆ 100 ಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಾಣ ಮಾಡ್ತಾರೆ ಕಮಲ್ ಹಾಸನ್

ಕಾಲಿವುಡ್ (Kollywood) ಸೂಪರ್ ಸ್ಟಾರ್ ಕಮಲ್ ಹಾಸನ್ `ವಿಕ್ರಮ್’ (Vikram) ಸಿನಿಮಾದ ಸಕ್ಸಸ್ ನಂತರ ಹಲವು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ನಟನೆ ಜೊತೆ ನಿರ್ಮಾಣಕ್ಕೂ ಕೈಹಾಕಿದ್ದಾರೆ. ತಮಿಳಿನ ಸ್ಟಾರ್ ಹೀರೋಗೆ 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕಮಲ್ ಮುಂದಾಗಿದ್ದಾರೆ.

ಸಕ್ಸಸ್ ಸಿಗದೇ ಕಂಗಲಾಗಿದ್ದ ಕಮಲ್ ಹಾಸನ್ (Kamal Haasan), ಕಳೆದ ವರ್ಷ ಅವರು ಭರ್ಜರಿ ಗೆಲುವು ಪಡೆದರು. ಅವರು ನಟಿಸಿದ `ವಿಕ್ರಮ್’ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಯಿತು. ಲೋಕೇಶ್ ಕನಗರಾಜ್ ನಿರ್ದೇಶನದ ಆ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಕಮಲ್ ಹಾಸನ್. ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಂಡಿತ್ತು. ಸಿನಿಮಾ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಇದರಿಂದ ಕಮಲ್ ಹಾಸನ್ ಅವರಿಗೆ ಸಖತ್ ಲಾಭ ಆಯಿತು. ಇದನ್ನೂ ಓದಿ: ವರುಣ್ ತೇಜ್ ಜೊತೆ ಲಾವಣ್ಯ ಮದುವೆ? ಸ್ಪಷ್ಟನೆ ನೀಡಿದ ನಟಿ

`ವಿಕ್ರಮ್’ ಚಿತ್ರದಿಂದ ಕಾಸು ಮಾಡಿಕೊಂಡಿರುವ ಕಮಲ್ ಹಾಸನ್ ಅವರು ಮತ್ತೆ ನಿರ್ಮಾಪಕನಾಗಿ ಹೆಜ್ಜೆ ಇಡುತ್ತಿದ್ದಾರೆ. ನಟ ಸಿಂಬು ನಟಿಸಲಿರುವ ಹೊಸ ಚಿತ್ರಕ್ಕೆ ಕಮಲ್ ಹಾಸನ್ ಅವರು 100 ಕೋಟಿ ರೂಪಾಯಿ ಬಂಡವಾಳ ಹೂಡಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಯಾರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ತಮಿಳಿನ ಪ್ರತಿಭಾನ್ವಿತ ನಟ ಸಿಂಬು (Actor Simbu) ಕೂಡ ಸಕ್ಸಸ್‌ಫುಲ್ ನಟನಾಗಿದ್ದಾರೆ. ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Comments

Leave a Reply

Your email address will not be published. Required fields are marked *