ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ- CBIವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆಯಲ್ಲಿ ಸಿಬಿಐ (CBI) ವಿಶೇಷ ನ್ಯಾಯಾಲಯ ರೆಡ್ಡಿಗೆ ಮತ್ತೊಂದು ಶಾಕ್ ನೀಡಿದೆ. ನಾಲ್ಕು ದೇಶಗಳ ಸಕ್ಷಮ್ಮ ಪ್ರಾಧಿಕಾರಕ್ಕೆ ಖುದ್ದು ನ್ಯಾಯಾಲಯವೇ ಮನವಿ ಮಾಡಿದ್ದು, ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ರೆಡ್ಡಿಗೆ ನ್ಯಾಯಾಲಯದ ತೂಗುಕತ್ತಿ ಮತ್ತೆ ನೇತಾಡುವಂತೆ ಮಾಡಿದೆ.

ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. 2008 ಹಾಗೂ 2009ರಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ರೆಡ್ಡಿ ಆಸ್ತಿಗಳ ವಿವರ ನೀಡುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಸ್ವಿಡ್ಜೆರ್‍ಲ್ಯಾಂಡ್, ಸಿಂಗಾಪುರ, ಯುಎಇ ಮತ್ತು ಐಲ್ ಆಫ್ ಮ್ಯಾನ್ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದಾರೆ.

ಗಾಲಿ ಜನಾರ್ದನ ರೆಡ್ಡಿ 2009-10ರ ಅವಧಿಯಲ್ಲಿ ಸುಮಾರು 7 ರಿಂದ 8 ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ವಿವಿಧ ದೇಶಗಳೊಂದಿಗೆ ವಹಿವಾಟು ನಡೆಸಿದ್ದಾರೆ. ಇದರ ಮೊತ್ತವನ್ನು ಆಯಾ ದೇಶಗಳಲ್ಲಿಯೇ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಜಿಎಲ್‍ಎ ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿರುವ ಕಂಪನಿ ಮತ್ತು ಬ್ಯಾಂಕ್ ಖಾತೆ ಇದೆಯೇ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು.

ನನಗೆ ಯಾವುದೇ ನೋಟಿಸ್ ಬಂದಿಲ್ಲ: ಈ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ ವಿದೇಶದಲ್ಲಿ ಆಸ್ತಿ ಮುಟ್ಟುಗೋಲು ಬಗ್ಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ವಿದೇಶದಲ್ಲಿ ಹಣ ಇದ್ರೆ ತರಲಿ, ನಾನೇ ಹಂಚುತ್ತೇನೆಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಭಾಯಿ ಭಾಯಿ, ಕುಟುಂಬದ ಪಕ್ಷಗಳು – ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ :ಜೆಪಿ ನಡ್ಡಾ

ಒಟ್ಟಿನಲ್ಲಿ ಚುನಾವಣಾ ಜೋಶ್‍ನಲ್ಲಿದ್ದ ಗಾಲಿ ಜನಾರ್ದನ ರೆಡ್ಡಿಗೆ ಶಾಕ್ ಎದುರಾಗಿದೆ. ನಾಲ್ಕು ದೇಶಗಳ ಪ್ರಾಧಿಕಾರ ಸಾಕ್ಷಿ ನೀಡಿದ್ದೆ ಆದಲ್ಲಿ, ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಲಿದೆ.

Comments

Leave a Reply

Your email address will not be published. Required fields are marked *