108 ಪ್ರಶ್ನೆಗಳನ್ನು ಮೂಡಿಸಿದ ನಟಿ ಪವಿತ್ರಾ ಲೋಕೇಶ್- ನರೇಶ್ ಮ್ಯಾರೇಜ್

ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ (Pavitra Lokesh) ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ (marriage) ಆಗುತ್ತಿರುವ ವಿಷಯವನ್ನು ಹಂಚಿಕೊಂಡಿದ್ದರು ತೆಲುಗು ನಟ ನರೇಶ್ (Naresh). ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ ನಂತರ, ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೋ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು. ಇದೀಗ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ನರೇಶ್.

ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಪವಿತ್ರಾ ಲೋಕೇಶ್ ಅವರನ್ನು ಸಂಪ್ರದಾಯಬದ್ಧವಾಗಿ ಮದುವೆ ಮಾಡಿಕೊಂಡಿದ್ದಾರೆ ನರೇಶ್. ಸಪ್ತಪದಿ ತುಳಿಯುವುದರಿಂದ ಹಿಡಿದ ಮದುವೆಯಲ್ಲಿ ಮಾಡಬಹುದಾದ ಎಲ್ಲ ಸಂಪ್ರದಾಯಗಳನ್ನು ಮಾಡಿದ್ದಾರೆ. ಆ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನು ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗಾಗಿ ನಿಜವಾಗಿಯೂ ನರೇಶ್ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ‌ʻಜೋಶ್ʼ ನಟಿ ಸ್ನೇಹಾ ಆಚಾರ್ಯ

ನರೇಶ್ ಆಪ್ತರ ಪ್ರಕಾರ ಇನ್ನೂ ನರೇಶ್ ಅವರಿಗೆ ಡಿವೋರ್ಸ್ ಸಿಕ್ಕಿಲ್ಲ. ಪತ್ನಿ ರಮ್ಯಾ ವಿಚ್ಛೇದನ ನೀಡುವುದಿಲ್ಲವೆಂದು ಘೋಷಿಸಿದ್ದಾರೆ. ಡಿವೋರ್ಸ್ ಸಿಗದೇ ನರೇಶ್ ಮದುವೆ ಆಗುವುದಕ್ಕೆ ಸಾಧ್ಯವಿಲ್ಲ. ಒಂದು ವೇಳೆ ಆಗಿದ್ದರೆ ಅದಕ್ಕೆ ಮಾನ್ಯತೆ ಇಲ್ಲ. ಅಲ್ಲದೇ ಅದೊಂದು ಅಪರಾಧ ಕೂಡ ಆಗಲಿದೆ. ಈ ಮದುವೆ ವಿರುದ್ಧ ರಮ್ಯಾ ಕೋರ್ಟ್ ಮೆಟ್ಟಿಲು ಹತ್ತಬಹುದು. ಇಷ್ಟೆಲ್ಲ ನರೇಶ್ ಅವರಿಗೂ ಗೊತ್ತಿದೆ, ಪವಿತ್ರಾ ಲೋಕೇಶ್ ಅವರಿಗೂ ಗೊತ್ತಿದೆ. ಇಷ್ಟಿದ್ದೂ ಮದುವೆಯಾದರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

ಈ ಮದುವೆ ವಿರುದ್ಧ ರಮ್ಯಾ ಕೋರ್ಟಿಗೆ ಹೋದರೆ, ಅದು ಸಿನಿಮಾಗಾಗಿ ತಗೆದಿರುವ ದೃಶ್ಯವೆಂದು ಹೇಳಿ ಬಚಾವ್ ಆಗಬಹುದು. ರಮ್ಯಾ ಸುಮ್ಮನಾದರೆ ಅದನ್ನೇ ಮದುವೆ ಎಂದು ಅಂದುಕೊಳ್ಳಬಹುದು ಎನ್ನುವ ಮಾತುಗಳು ಕೂಡ ತೆಲುಗು ಸಿನಿಮಾ ರಂಗದಲ್ಲಿ ಹರಿದಾಡುತ್ತಿದೆ. ಒಟ್ಟಿನಲ್ಲಿ ನರೇಶ್, ಈ ವಿಡಿಯೋವನ್ನು ಪೋಸ್ಟ್ ಮಾಡುವ ಮೂಲಕ ಭಾರೀ ಸುದ್ದಿಯಂತೂ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *