ಸುಮಲತಾ ಬೆಂಬಲದಿಂದ ಮಂಡ್ಯದಲ್ಲಿ ನಮಗೆ ದೊಡ್ಡ ಶಕ್ತಿ ಬಂದಿದೆ – ಬೊಮ್ಮಾಯಿ

ಹುಬ್ಬಳ್ಳಿ/ಹಾವೇರಿ: ಸಂಸದೆ ಸುಮಲತಾ (Sumalatha) ಅವರ ಬೆಂಬಲದಿಂದ ನಮಗೆ ಮಂಡ್ಯದಲ್ಲಿ (Mandya) ದೊಡ್ಡ ಶಕ್ತಿ ಬಂದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

Sumalatha 1 1

ಹಾವೇರಿಯಲ್ಲಿ (Haveri) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಸುಮಲತಾ ನಮ್ಮ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿರುವುದು ಸಂತೋಷವಾಗಿದೆ. ಆರಂಭದಿಂದಲೂ ಮೋದಿ ಅವರ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಾ ಬಂದಿದ್ದರು. ಇದೀಗ ಅಧಿಕೃತ ಘೋಷಣೆಯಿಂದ ಮಂಡ್ಯದಲ್ಲಿ ನಮಗೆ ದೂಡ್ಡ ಶಕ್ತಿ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

SUMALATHA AMBAREESH

ಇದಕ್ಕೂ ಮುನ್ನ ಹಾವೇರಿಯಲ್ಲಿ ಮಾತನಾಡಿದ ಅವರು, ಮೋದಿ (Narendra Modi) ಪ್ರತಿ ಬಾರಿ ಬಂದಾಗಲೂ ರಾಜ್ಯದ ಮೂಲಸೌಕರ್ಯಗಳಿಗೆ ಹಣ ಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಿಗೂ ಅತಿ ಹೆಚ್ಚು ಹಣ ಕೊಟ್ಟಿದ್ದಾರೆ. ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ ಅತಿ ಹೆಚ್ಚು ಹಣ ಕೊಟ್ಟಿದ್ದು ಮೋದಿ. ರೈಲ್ವೆ, ಬಂದರು ಇತ್ಯಾದಿ ಕಾರ್ಯಕ್ರಮಗಳಿಗೂ ಹಣ ಕೊಟ್ಟಿದ್ದಾರೆ. ಆದ್ದರಿಂದ ಮೋದಿ ರಾಜ್ಯಕ್ಕೆ ಬಂದಾಗಲೆಲ್ಲಾ ಭೂಮಿಪೂಜೆ ಅಥವಾ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿದೆ ಎಂದು ಮೋದಿ ಅವರ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ: ಸುಮಲತಾ

ಈ ಬಾರಿ ಮೋದಿ ಬಂದಾಗ ಐಐಟಿ ಹಾಗೂ ಜಯದೇವ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸ್ತಾರೆ. ಐಐಟಿಗೆ ಹಂತ ಹಂತವಾಗಿ ಹಣ ಕೊಡ್ತೇವೆ. ದೇಶದಲ್ಲೇ ಐಐಟಿಯನ್ನ ನಂಬರ್ 1 ಸಂಸ್ಥೆ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *