ಲಕ್ನೋ: ಗುಡಿಸಿಲಿಗೆ ಬೆಂಕಿ ಬಿದ್ದ ಪರಿಣಾಮ ದಂಪತಿ (Couple) ಹಾಗೂ ಅವರ ಮೂರು ಮಕ್ಕಳು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಹರಾಮೌನಲ್ಲಿ (Haramau) ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ (Short circuit) ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮುಂಜಾನೆ ಅವಘಡ ನಡೆಯುವಾಗ ಎಲ್ಲರೂ ನಿದ್ರೆಗೆ ಜಾರಿದ್ದರು. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹೊನ್ನಾವರದಲ್ಲಿ ಆರು ಜಾನುವಾರುಗಳನ್ನು ತಿಂದು ತೇಗಿದ ಚಿರತೆ
ಮೃತರನ್ನು ಸತೀಶ್ (27), ಆತನ ಪತ್ನಿ ಕಾಜಲ್ (24), ಮಕ್ಕಳಾದ ಸನ್ನಿ (7), ಸಂದೀಪ್ (4), ಗುಡಿಯಾ (2) ಎಂದು ಕಾನ್ಪುರದ ಪೊಲೀಸ್ ವರಿಷ್ಠಾಧಿಕಾರಿ ಬಿಬಿಜಿಟಿಎಸ್ ಮೂರ್ತಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ನಾನು ಅನ್ಯಗ್ರಹದಿಂದ ಬಂದಿದ್ದೇನೆ – ಬೀದಿಯಲ್ಲಿ ಬೆತ್ತಲಾಗಿ ಓಡಾಡ್ತಿದ್ದ ವ್ಯಕ್ತಿ ಅರೆಸ್ಟ್

Leave a Reply