ಬೆಂಗಳೂರಿನಲ್ಲಿ ವಾಹನಗಳ ಪರಿಶೀಲನೆ ಆರಂಭ – ಮೊದಲ ದಿನವೇ 10 ಕೆಜಿ ಬೆಳ್ಳಿ ವಶ

ಬೆಂಗಳೂರು: ಚುನಾವಣೆ (Karnataka Election) ಹತ್ತಿರವಾಗುತ್ತಿದ್ದಂತೆ ಬೆಂಗಳೂರು ಪೊಲೀಸರು (Bengaluru Police) ಅಲರ್ಟ್ ಆಗಿದ್ದಾರೆ. ಶನಿವಾರ ರಾತ್ರಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ವಾಹನಗಳ ತಪಾಸಣೆ ಶುರುಮಾಡಿದ್ದಾರೆ.

ಬೈಕ್, ಕಾರು, ಆಟೋ, ಲಾರಿ ಸೇರಿದಂತೆ ಎಲ್ಲಾ ವಾಹನಗಳನ್ನು ತಪಾಸಣೆ (Checking Vehicles) ಮಾಡುತ್ತಿರುವ ಪೊಲೀಸರು, ನಗರದಿಂದ ಹೊರ ಹೋಗುವ, ಒಳಬರುವ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರಿಗೆ ತೊಂದರೆಕೊಡುವ ಉದ್ದೇಶದಿಂದ ಮೀಸಲಾತಿಯಲ್ಲಿ ದ್ರೋಹ – ಸಿದ್ದು ಸಿಡಿಮಿಡಿ

ಅಭ್ಯರ್ಥಿಗಳು ಮತದಾರರಿಗೆ ಅಮಿಷವೊಡ್ಡುತ್ತಿದ್ದ ಬಗ್ಗೆ ಚುನಾವಣೆ ಅಧಿಕಾರಿಗಳು ಸಭೆ ನಡೆಸಿದ ವೇಳೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಚುನಾವಣೆಯ ಸಮಯದಲ್ಲಿ ಅಕ್ರಮವಾಗಿ ಹಣ, ಮದ್ಯ, ಉಡುಗೊರೆ ಸೇರಿದಂತೆ ಅನುಮಾನಾಸ್ಪದ ವಸ್ತುಗಳ ಬಗ್ಗೆ ನಿಗಾ ಇಟ್ಟಿರುವ ಪೊಲೀಸರು, ಮೊದಲ ದಿನವೇ ಎಸ್‌ಜೆ ಪಾರ್ಕ್ ಪೊಲೀಸರಿಂದ ದಾಖಲೆಯಿಲ್ಲದ ಹತ್ತು ಕೆಜಿ ಬೆಳ್ಳಿ ವಸ್ತುಗಳು ವಶಕ್ಕೆ ಪಡೆದಿದ್ದಾರೆ.

ಎರಡು ಲಕ್ಷ ರೂ.ಗಿಂತ ಅಧಿಕ ನಗದನ್ನು ಸಾಗಾಟ ಮಾಡುವಂತಿಲ್ಲ. ಎರಡು ಲೀಟರ್‌ಗೂ‌ ಹೆಚ್ಚು ಮದ್ಯ ಸಾಗಿಸುವಂತಿಲ್ಲ. ಒಂದು ವೇಳೆ ದೊಡ್ಡ ಮಟ್ಟದ ಹಣ, ವಸ್ತುಗಳು ಸಾಗಾಟ ಮಾಡಿದರೆ ಸೂಕ್ತ ದಾಖಲೆ ನೀಡಬೇಕಾಗುತ್ತದೆ.

Comments

Leave a Reply

Your email address will not be published. Required fields are marked *