ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ‌ ಹರಿದಾಡುತ್ತಿರುವ ಸುದ್ದಿ ಸುಳ್ಳು: KMF ಸ್ಪಷ್ಟನೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಂದಿನಿ (Nandini Milk) ಬ್ರ್ಯಾಂಡ್‌ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಕುರಿತು ಕೆಎಂಎಫ್‌ ಸ್ಪಷ್ಟನೆ ಕೊಟ್ಟಿದೆ. ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಕೆಎಂಎಫ್‌ (KMF) ತಿಳಿಸಿದೆ.

ನಂದಿನಿ ಬ್ರ್ಯಾಂಡ್‌ ಹಾಲು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಅನ್ನೋ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್‌ನಲ್ಲಿ ನಡೆದಿರುವುದಿಲ್ಲವೆಂದು ತಿಳಿಸಲು ಬಯಸುತ್ತೇವೆ. ಯಾವುದೇ ಸಹಕಾರ ಸಂಸ್ಥೆ ಅಥವಾ ಉತ್ಪಾದನಾ ಮಹಾಮಂಡಳಗಳೊಂದಿಗೆ ನಾವು ಒಡಂಬಡಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಮುಲ್ ದೇಶದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ – ಸಿ.ಟಿ ರವಿ ಪ್ರಶ್ನೆ

ದೇಶದ ಅನೇಕ ನಗರಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿವೆ. ನಂದಿನಿ ಹಾಲು ಇತರೆ ಹಾಲಿನ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡುತ್ತಾ ಮಾರುಕಟ್ಟೆಯನ್ನು ವಿಸ್ತರಿಸುತ್ತಿದೆ. ಗ್ರಾಹಕರು ಎಂದಿನಂತೆ “ನಂದಿನಿ” ಬ್ರ್ಯಾಂಡ್‌ನ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕೊಂಡು ಪ್ರೋತ್ಸಾಹಿಸಲು ನಾವು ಮನವಿ ಮಾಡುತ್ತೇವೆ ಎಂದು ಹೇಳಿದೆ.

ಇಂತಹ ಸಂಸ್ಥೆಯ ಬಗ್ಗೆ ಸದ್ಯ ಹರಿದಾಡುತ್ತಿರೋ ಸುದ್ದಿಗಳು ಸುಳ್ಳಾಗಿದ್ದು, ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತವು ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: KMFಗೆ ಬೊಮ್ಮಣ್ಣ ಕೈ ಹಾಕಿದ್ರೆ ರಕ್ತ ಕ್ರಾಂತಿಯಾಗುತ್ತೆ: ಸಿಎಂ ಇಬ್ರಾಹಿಂ ಎಚ್ಚರಿಕೆ