ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

ಯಾದಗಿರಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯ ಚುನಾವಣಾ (Election) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಟಿಕೆಟ್‌ ಲಭಿಸಿದೆ. ಗುರುಮಠಕಲ್‌ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ (BJP) ಹೊಸ ಸಾಹಸಕ್ಕೆ ಮುಂದಾಗಿದೆ. ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಲಲಿತಾ ಅನಪೂರಗೆ (Lalita Anpur) ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಈ ಮೂಲಕ ಇತ್ತೀಚೆಗೆ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ (Congress) ಸೇರಿರುವ ಅಭ್ಯರ್ಥಿ ಬಾಬುರಾವ್ ಚಿಂಚನಸೂರಗೆ ಬಿಜೆಪಿ ಚೆಕ್‍ಮೇಟ್ ನೀಡಿದೆ.

ಇದುವರೆಗೂ ಜಿಲ್ಲೆಯ ಯಾವುದೇ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಯಾವುದೇ ಪಕ್ಷ ಮಣೆ ಹಾಕಿರಲಿಲ್ಲ. ಹೀಗಾಗಿ ಈ ಬಾರಿ ಮಹಿಳೆಯರಿಗೆ ಅವಕಾಶ ನೀಡಿರುವುದು ಇಲ್ಲಿನ ಚುನಾವಣೆ ವಿಶೇಷಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗುಡ್‌ ಬೈ

ಹಿಂದುಳಿದ ಕೋಲಿ ಕಬ್ಬಲಿಗ ಸಮುದಾಯದ ಅತ್ಯಂತ ಪ್ರಭಾವಿ ಮಹಿಳೆಯಾಗಿರುವ ಲಲಿತಾ ಅನಪೂರ ಯಾದಗಿರಿ (Yadgiri) ನಗರಸಭೆಯ ಹಾಲಿ ಸದಸ್ಯರಾಗಿದ್ದಾರೆ. ಗುರುಮಠಕಲ್ ಕ್ಷೇತ್ರದಲ್ಲಿ ಸಮುದಾಯದ ಹೆಚ್ಚಿನ ಮತಗಳು ಇರುವುದರಿಂದ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನೀಡಿದೆ. ಕ್ಷೇತ್ರದಲ್ಲಿ ಉತ್ತಮ ಪೈಪೋಟಿ ನೀಡಲಿದ್ದಾರೆ ಎನ್ನುವ ರಾಜಕೀಯ ಲೆಕ್ಕಾಚಾರ ಇದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ (Gurumatkal) ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಬಾಬುರಾವ್ ಚಿಂಚನಸೂರ ಹಾಗೂ ಜೆಡಿಎಸ್‍ನಿಂದ (JDS) ಶರಣಗೌಡ ಕಂದಕೂರಗೆ ಈಗಾಗಲೇ ಟಿಕೆಟ್ ಘೋಷಣೆಯಾಗಿತ್ತು. ಇದನ್ನೂ ಓದಿ: ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ