ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

ಬೆಂಗಳೂರು: ಕಳೆದ ಮಾರ್ಚ್‌ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (PUC Examination Results) ಏಪ್ರಿಲ್‌ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

ಕಳೆದ ಮಾರ್ಚ್‌ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದನ್ನೂ ಓದಿ: 50 ವರ್ಷಗಳಿಂದ ಕಾಂಗ್ರೆಸ್ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿಲ್ಲ: ಬೊಮ್ಮಾಯಿ

ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ.