ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ

SSLC RESULT

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ (SSLC Result) ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಸುದ್ದಿಗೋಷ್ಟಿ ಕರೆದಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆ ಆಗಲಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍  karresults.nic.in  ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಮೋದಿ ರೋಡ್‌ಶೋ; `ಜೈ ಬಜರಂಗಿ’ ಪೋಸ್ಟರ್ ಹಿಡಿದು ಗಮನ ಸೆಳೆದ ಮುಸ್ಲಿಂ ಮಹಿಳೆ