ಚರಂಡಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಒಂದೇ ಕುಟುಂಬದ 5 ಕಾರ್ಮಿಕರು ಸಾವು

ಮುಂಬೈ: ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಕಾರ್ಮಿಕರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಪರ್ಭಾನಿ (Parbhani) ಜಿಲ್ಲೆಯಲ್ಲಿ ನಡೆದಿದೆ.

ವರದಿಗಳ ಪ್ರಕಾರ ಗುರುವಾರ ಮಧ್ಯಾಹ್ನ 6 ಕಾರ್ಮಿಕರು ಭೌಚಾ ತಾಂಡಾ ಪ್ರದೇಶದ ಜಮೀನಿನಲ್ಲಿದ್ದ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದರು. ಚರಂಡಿಗೆ ಇಳಿದವರು ಸ್ವಲ್ಪ ಹೊತ್ತಿನಲ್ಲಿ ಒಬ್ಬೊಬ್ಬರಂತೆ ಅಸ್ವಸ್ಥರಾಗಿದ್ದು ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಅಸ್ವಸ್ಥಗೊಂಡಿದ್ದ 6 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ.

ಮೃತರೆಲ್ಲರನ್ನೂ ಗುರುತಿಸಲಾಗಿದ್ದು, ಒಂದೇ ಕುಟುಂಬದ ಸದಸ್ಯರು ಎಂಬುದು ತಿಳಿದುಬಂದಿದೆ. ಎಲ್ಲರ ಶವಗಳನ್ನೂ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅವರ ಜೊತೆಗಿದ್ದ ಇನ್ನೊಬ್ಬ ಕಾರ್ಮಿಕನ ಸ್ಥಿತಿಯೂ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಲಿಗೆ ಮೊಬೈಲ್‌ ಕಟ್ಟಿಕೊಂಡು, ಕೇಸರಿ ಶಾಲು ಹಾಕ್ಕೊಂಡು ಮತ ಎಣಿಕೆಗೆ ಬಂದಿದ್ದ ಏಜೆಂಟ್‌ ವಾಪಸ್‌

ಚರಂಡಿ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಕಾರ್ಮಿಕರು ವಿಷಕಾರಿ ಗಾಳಿ ಸೇವಿಸಿ ಬಳಿಕ ಉಸಿರುಗಟ್ಟಿದ್ದರಿಂದ ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿದೆ. ಕಾರ್ಮಿಕರ ಆಕಸ್ಮಿಕ ಸಾವಿನ ಕುರಿತಾಗಿ ಸೋನ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ತನಿಖೆಯನ್ನು ಮುಂದುವರಿಸಲಾಗಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ – 114, ಬಿಜೆಪಿ – 83, ಜೆಡಿಎಸ್‌ – 24 ಮುನ್ನಡೆ LIVE Updates