ಪುತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ಗೆ ದಂತದಿಂದ ತಿವಿದ ಕಾಡಾನೆ!

ಮಂಗಳೂರು: ಪುತ್ತೂರಿಂದ ಬೆಂಗಳೂರಿಗೆ (Puttur- Bengaluru) ತೆರಳುತ್ತಿದ್ದ ಕೆಎಸ್‍ಆರ್‌ಟಿ ಸಿ ಸ್ಲೀಪರ್ ಕೋಚ್ ಬಸ್‍ (KSRTC Sleeper Coach Bus) ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ನಡೆದಿದೆ.

ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪ ತಡರಾತ್ರಿ ಘಟನೆ ನಡೆದಿದೆ. ಕಾಡಾನೆ (Wild Elephant) ದಾಳಿಯಿಂದ ಬಸ್‍ಗೆ ಹಾನಿಯಾಗಿದ್ದು, ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಇದನ್ನೂ ಓದಿ: ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

ಬಸ್ ಪುತ್ತೂರಿನಿಂದ ಕಾಣಿಯೂರು (Kaniyoor) ಮಾರ್ಗವಾಗಿ ಸುಬ್ರಹ್ಮಣ್ಯ (Subrahmanya) ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ ಚಾಲಕ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದ್ದಾರೆ. ಆದರೂ ಬಸ್ಸಿನ ಎಡಭಾಗಕ್ಕೆ ಆನೆ ತನ್ನ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ.

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ, ಪರಿಶೀಲನೆ ನೀಡಿಸಿದ್ದಾರೆ. ಪರಿಶೀಲನೆ ಬಳಿಕ ಬಸ್ ಬೆಂಗಳೂರಿನತ್ತ ತೆರಳಿದೆ.