ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಇಂಪಾಲ್: ಜೂನ್ 29 ರಿಂದ 2 ದಿನಗಳ ಕಾಲ ಹಿಂಸಾಚಾರ ಪೀಡಿತ ಮಣಿಪುರಕ್ಕೆ (Manipur) ಭೇಟಿ ನೀಡಲಿರುವ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ದೆಹಲಿಯ ವಿಮಾನ ನಿಲ್ದಾಣದಿಂದ ಮಣಿಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ರಾಹುಲ್ ಗಾಂಧಿಯವರು ಹಿಂಸಾಚಾರ ಪೀಡಿತ ಪ್ರದೇಶದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಜನಾಂಗೀಯ ಘರ್ಷಣೆಯಿಂದ ನಿರಾಶ್ರಿತರಾದ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಇಂಪಾಲ್ ಮತ್ತು ಚುರಾಚಂದ್‍ಪುರದಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ

ರಾಹುಲ್ ಭೇಟಿ ನೀಡುತ್ತಿರುವುದು ಶುಭ ಸೂಚನೆ ಎಂದು ಮಣಿಪುರದ ಪ್ರಮುಖ ನಾಗರಿಕ ಸಮಾಜ ಸಂಘಟನೆ (ಸಿಎಸ್‍ಒ) ಹೇಳಿದೆ. ಅವರು ಬರುತ್ತಿರುವುದು ಸ್ವಲ್ಪ ತಡವಾಗಿದೆ. ಆದರೆ ಇದು ಒಳ್ಳೆಯ ಬೆಳವಣಿಗೆ ಎಂದು ಸಂಸ್ಥೆ ಹೇಳಿದೆ.

ಮಣಿಪುರದ ಗವರ್ನರ್ ಅನುಸೂಯಾ ಉಯ್ಕೆ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ಮಣಿಪುರದಲ್ಲಿನ ಹಿಂಸಾಚಾರದ ಪರಿಸ್ಥಿತಿಯ ಬಗ್ಗೆ ಅವರೊಂದಿಗೆ ಚರ್ಚಿಸಿದ್ದಾರೆ.

ರಾಹುಲ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಮಣಿಪುರದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಒಕ್ರಾಮ್ ಇಬೋಬಿ ಸಿಂಗ್ ಅವರು ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮಣಿಪುರದಲ್ಲಿ ಸುಮಾರು ಎರಡು ತಿಂಗಳುಗಳಿಂದ ಹಿಂಸಾಚಾರ ನಡೆಯುತ್ತಿದೆ. ಹಿಂಸೆಯಿಂದ ಶಾಂತಿಯತ್ತ ಸಾಗಲು ಗುಣಪಡಿಸುವ ಸ್ಪರ್ಶದ ಅಗತ್ಯವಿದೆ. ಇದೊಂದು ಮನುಷ್ಯ ಇತಿಹಾಸದ ದುರಂತವಾಗಿದೆ ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]