ಹೆಚ್ಚುತ್ತಿರುವ ಅಪಘಾತ ತಪ್ಪಿಸಲು ಎಕ್ಸ್‌ಪ್ರೆಸ್‌ವೇನಲ್ಲಿ Interceptor ಬಳಕೆ

ಬೆಂಗಳೂರು: ಬೆಂಗಳೂರು-ಮೈಸೂರು (Bengaluru-Mysuru Expressway) ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಪ್ಪಿಸಲು ಪೊಲೀಸ್‌ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಾಫಿಕ್‌ ಪೊಲೀಸ್‌ ಇನ್ಟರ್‌ಸೆಪ್ಟರ್‌ಗಳನ್ನ ಅಳವಡಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅತೀ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲು ರಾಡಾರ್‌ ಸ್ಪೀಡ್‌ ಗನ್‌ಗಳನ್ನ ಬಳಸಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ (Alok Kumar) ಅವರು ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

ಈ ನಿಟ್ಟಿನಲ್ಲಿ ಕ್ರಮಕೈಗೊಂಡಿರುವ ರಾಮನಗರ ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ದಂಡ ಕಟ್ಟುವ ಹಣ ಉಳಿಸಿಕೊಳ್ಳಬೇಕು ಎನ್ನುವ ಕಾರಣಕ್ಕಲ್ಲ, ಜೀವ ಉಳಿಸುವುದಕ್ಕಾಗಿ ಸಂಚಾರ ನಿಯಮ ಪಾಲಿಸಿ ಎಂದು ಜನರಿಗೆ ಕಿವಿಮಾತು ಹೇಳಿದ್ದಾರೆ.

ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದಾಗಿನಿಂದ ರಸ್ತೆ ಅಪಘಾತಗಳು ಹೆಚ್ಚಾಗಿವೆ. ಅಪಘಾತದಲ್ಲಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಎಕ್ಸ್‌ಪ್ರೆಸ್‌ವೇನಲ್ಲಿ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ಅಪಘಾತಗಳ ಸಂಖ್ಯೆ ಹೆಚ್ಚಳ – ದಶಪಥ ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಹೆದ್ದಾರಿಯಲ್ಲಿ ಸಂಚರಿಸುವಾಗ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ವಾಹನ ಸವಾರರಿಗೆ ಎಚ್ಚರಿಕೆ ಕೊಟ್ಟಿದ್ದರು. ವೇಗವಾಗಿ ವಾಹನ ಚಲಾಯಿಸಿದವರ ಡಿಎಲ್‌ ರದ್ದು ಮಾಡಲಾಗುವುದು ಎಂದು ಸಹ ಎಚ್ಚರಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಎಕ್‌ಪ್ರೆಸ್‌ವೇನಲ್ಲಿ ವಾಹನಗಳ ವೇಗದ ಚಾಲನೆ ತಪ್ಪಿಸಲು ಟ್ರಾಫಿಕ್‌ ಪೊಲೀಸ್‌ ಇನ್ಟರ್‌ಸೆಪ್ಟರ್‌ಗಳನ್ನ ಬಳಸಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]