ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

ಲಕ್ನೋ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ತಂಡ ಇಂದು (ಸೋಮವಾರ) ವಾರಣಾಸಿಯ (Varanasi) ಜ್ಞಾನವಾಪಿ (Gyanvapi) ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Court) ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಈ ಸರ್ವೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಸಮೀಕ್ಷೆ ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ. ಮಸೀದಿಯಲ್ಲಿ ಶಿವಲಿಂಗದಂತೆ ಕಾಣುವ ರಚನೆ 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿತ್ತು. ಈಗ ನಡೆಯುತ್ತಿರುವ ಸಮೀಕ್ಷೆಯ ವರದಿಯನ್ನು ಆ.4ರ ಒಳಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತಪಾಸಣೆ ನಡೆಸಲಾಗುತ್ತಿದೆ. ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ನಂತರ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಬಗ್ಗೆ ಸಂಪೂರ್ಣ ಸತ್ಯವನ್ನು ಹೊರತರಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದಿದ್ದರು. ಆದರೆ ಜ್ಞಾನವಾಪಿ ಮಸೀದಿಯ ಸಿಬ್ಬಂದಿ ಶಿವಲಿಂಗದ ರಚನೆಯು ವಝುಖಾನಾದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಿದ್ದರು. ವಿಚಾರಣೆಯ ಭಾಗವಾಗಿ ವೈಜ್ಞಾನಿಕ ತನಿಖೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಅರ್ಜಿದಾರರ ಪರವಾಗಿಯೂ ಪ್ರತಿನಿಧಿಸುವ ಸುಭಾಷ್ ನಂದನ್ ಚತುರ್ವೇದಿ, ನ್ಯಾಯಾಲಯದ ನಿರ್ಧಾರವು ಪ್ರಕರಣದಲ್ಲಿ ಮಹತ್ವದ ತಿರುವು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]