ಮೋಹನ್ ಲಾಲ್ ಜೊತೆ ‘ವೃಷಭ’ ಸಿನಿಮಾ ಶೂಟಿಂಗ್ ಪ್ರಾರಂಭಿಸಿದ ರಾಗಿಣಿ

ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ (Mohan Lal) ಅವರು ಪ್ಯಾನ್ ಇಂಡಿಯಾ ಸಿನಿಮಾ ವೃಷಭ (Vrushabha)  ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮೋಹಲ್ ಲಾಲ್ ಜೊತೆ ಕನ್ನಡದ ಬ್ಯೂಟಿ ರಾಗಿಣಿ (Ragini) ಕೂಡ ನಟಿಸುತ್ತಿದ್ದಾರೆ. ಚಿತ್ರತಂಡದ ಜೊತೆಗಿನ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

ಬಹುಭಾಷಾ ನಟ ಮೋಹನ್ ಲಾಲ್ (Mohan Lal) ಅವರು ಕನ್ನಡದ ನಿರ್ದೇಶಕ ನಂದಕಿಶೋರ್ (Nanda Kishor) ಡೈರೆಕ್ಷನ್ ಮಾಡ್ತಿದ್ದಾರೆ. ಕಳೆದ ಭಾನುವಾರದಿಂದ ಮೈಸೂರಿನಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಡಿಫರೆಂಟ್ ಆಗಿರೋ ಕಥೆಯನ್ನ ಹೇಳೋಕೆ ಹೊರಟಿದ್ದಾರೆ. ‘ಕಾಂದಹಾರ್’ ಬಳಿಕ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆ ಮತ್ತೆ ನಟಿಸುವ ಚಾನ್ಸ್ ರಾಗಿಣಿ ಗಿಟ್ಟಿಸಿಕೊಂಡಿದ್ದಾರೆ. ಸಿನಿಮಾದ ಭಾಗವಾಗಿರೋದಕ್ಕೆ ಚಿತ್ರತಂಡಕ್ಕೆ ನಟಿ ಧನ್ಯವಾದಗಳನ್ನ ತಿಳಿಸಿದ್ದಾರೆ.

ನಟಿ ರಾಗಿಣಿ ಇದೀಗ ಕನ್ನಡದ ಬ್ಯುಸಿ ನಟಿಯಾಗಿದ್ದಾರೆ. ತುಪ್ಪದ ಬೆಡಗಿಗೆ ಡಿಮ್ಯಾಂಡ್‌ ಜಾಸ್ತಿಯಾಗಿದೆ, ಸಾಲು ಸಾಲು ಸಿನಿಮಾಗಳನ್ನ ಮಾಡ್ತಿದ್ದಾರೆ. 8ಕ್ಕೂ ಹೆಚ್ಚು ಸಿನಿಮಾಗಳಿಗೆ ರಾಗಿಣಿ ನಾಯಕಿಯಾಗಿದ್ದಾರೆ. ಕನ್ನಡದ ಜೊತೆ ಸೌತ್-ಬಾಲಿವುಡ್‌ನಲ್ಲಿ ತುಪ್ಪದ ಬೆಡಗಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

‘ವೃಷಭ’ (Vrushaba) ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಸಾಹಸ ಮತ್ತು ರೋಚಕ ದೃಶ್ಯಗಳು ಇರಲಿದ್ದು, ನಟ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ನಟಿ ರಾಗಿಣಿ ಪಾತ್ರಕ್ಕೂ ಪ್ರಾಮುಖ್ಯತೆಯಿದೆ.

ಈ ಚಿತ್ರವನ್ನು ಬಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಬಹುನಿರೀಕ್ಷಿತ ಈ ಚಿತ್ರವು ಮುಂದಿನ ವರ್ಷ ಜಗತ್ತಿನಾದ್ಯಂತ 4500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]