ಸುಲಿಗೆ ಮನಸ್ಥಿತಿಗೆ ಸೂಕ್ತ ಚಿಕಿತ್ಸೆ ಬೇಡವೇ?: ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರರಿಗೆ ಹಣ ಬಿಡುಗಡೆಗೆ ಲಂಚ ಕೇಳುತ್ತಿರೋ ಸರ್ಕಾರದ ಮಂತ್ರಿಗಳ ವರ್ತನೆ ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಅವರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಂದರ್ಶನವನ್ನು ಟ್ಯಾಗ್ ಮಾಡಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಟ್ವೀಟ್‌ನಲ್ಲೇನಿದೆ?
ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? ಈಗ ವಿಷಯಾಂತರ ಮಾಡಿ, ಕುಮಾರಸ್ವಾಮಿಯ ಟೀಕೆ, ಭಾಷೆ, ಆರೋಪ ಇಟ್ಟುಕೊಂಡು ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ. ಆದರೆ ಅನುದಿನವೂ ವರ್ಗಾವಣೆ, ಕಮಿಷನ್ ದಂಧೆಯಲ್ಲಿ ಬೇಯುತ್ತಿರುವವರ ಕರುಣಾಜನಕ ಕಥೆಗಳಿಗೆ ಕೊನೆ ಎಂದು?

ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ? ಇಂಥ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯನವರೇ? ಸರ್ಕಾರಿ ಉದ್ಯೋಗಿಗಳು, ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ? ಮಾನಸಿಕ ಸ್ಥಿಮಿತತೆ ಎಂದರೆ ಸರ್ಕಾರಿ ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ? ನುಡಿದಂತೆ ನಡೆಯುವುದು ಎಂದರೆ ಇದೇನಾ? ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ಸಿದ್ದಕಲೆ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಸಿಎಂ ಕಚೇರಿಯ ಐದಾರು ಟಿಪ್ಪಣಿಗಳು ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ. ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದು ಸಿದ್ದರಾಮಯ್ಯರನ್ನು ಹೆಚ್‌ಡಿಕೆ ಕುಟುಕಿದ್ದಾರೆ. ಇದನ್ನೂ ಓದಿ: 136 ಸ್ಥಾನ ಬರುತ್ತೆ ಎಂದಿದ್ದಕ್ಕೆ ನನ್ನನ್ನು ಮೆಂಟಲ್‌ ಎಂದಿದ್ರು: ಡಿಕೆಶಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]