50ರ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆ ಇಲ್ಲ: ಕಾಂಗ್ರೆಸ್ ಶಾಸಕಿ ಹೇಳಿಕೆ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಫ್ಲೈಯಿಂಗ್ ಕಿಸ್ (Flying Kiss) ಕೊಟ್ಟ ವಿಚಾರ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಈ ವಿಚಾರದ ಬಗ್ಗೆ ಎರಡು ಪಕ್ಷಗಳು ಕಿತ್ತಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು, 50 ವರ್ಷದ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆಯಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ರಾಗುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿರುವ ವಿಚಾರವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ನಾಯಕಿ ನೀತು ಸಿಂಗ್, ನಮ್ಮ ರಾಹುಲ್ ಗಾಂಧಿಯವರಿಗೆ ಯಾವ ಹುಡುಗಿಯರ ಕೊರತೆಯಿಲ್ಲ. ಅವರಿಗೆ ಫ್ಲೈಯಿಂಗ್ ಕಿಸ್ ಕೊಡೋದಿದ್ದರೆ ಯಾರಾದರೂ ಹುಡುಗಿಗೆ ನೀಡುತ್ತಿದ್ದರು. ಈ 50 ವರ್ಷದ ಅಜ್ಜಿಗೆ ಯಾಕೆ ಕೊಡುತ್ತಿದ್ದರು? ಈ ಎಲ್ಲಾ ಆರೋಪಗಳು ಆಧಾರ ರಹಿತವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಬುಧವಾರ ಲೋಕಸಭೆಯಲ್ಲಿ 20ಕ್ಕೂ ಹೆಚ್ಚು ಮಹಿಳಾ ಸಂಸದರ ಸಮ್ಮುಖದಲ್ಲಿ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಯಿತು. ಬಳಿಕ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಈ ಯಾವ ದೃಶ್ಯಗಳು ಲೋಕಸಭೆಯಲ್ಲಿರುವ ಮುಖ್ಯ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ. ಆದರೆ ಪ್ರತ್ಯಕ್ಷದರ್ಶಿ ಸಂಸದರು ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿ ನಡೆ ಅನುಚಿತವಾಗಿತ್ತು ಎಂದು ಆರೋಪಿಸಿದ್ದಾರೆ. ಇದು ಅಶ್ಲೀಲ ಮತ್ತು ಸ್ತ್ರೀದ್ವೇಷದ ಪುರುಷ ಮಾತ್ರ ಸಂಸತ್ತಿನಲ್ಲಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಲು ಸಾಧ್ಯ. ಇಂತಹ ಉದಾಹರಣೆ ಹಿಂದೆಂದೂ ಕಂಡಿರಲಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: BJP ಸಂಸದರಿಗೆ ರಾಗಾ ಫ್ಲೈಯಿಂಗ್ ಕಿಸ್ – ಅದು ಪ್ರೀತಿಯ ಸನ್ನೆ ಎಂದು ಶಿವಸೇನೆ ಸಂಸದೆ ಸಮರ್ಥನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]