ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ IT ದಾಳಿ – ಆಭರಣ ವ್ಯಾಪಾರಿಗಳಿಗೆ ಬಿಗ್‌ ಶಾಕ್

ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ (ಜ್ಯುವೆಲರಿ ಶಾಪ್) (Jewellery Shop) ಮೇಲೆ ಐಟಿ ಅಧಿಕಾರಿಗಳು (IT Raid) ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಮಂಗಳೂರಿನ (Mangaluru) ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ IT ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆ

ಈ ಸಂದರ್ಭದಲ್ಲಿ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದಲ್ಲಿ ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿರುವುದು ಕಂಡುಬಂದಿದೆ. ಇದನ್ನೂ ಓದಿ: ಕುರ್ಕುರೆ, ಬಿಸ್ಕೆಟ್‌ ಪ್ಯಾಕ್‌ ಕದ್ದ ಆರೋಪ – ಬಾಲಕರನ್ನ ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕನ ವಿರುದ್ಧ ಕೇಸ್‌

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಆಭರಣ ಮಳಿಗೆಗಳಿವೆ. ಉಡುಪಿಯ (Udupi0 ಹಲವಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

ಇದೇ ವೇಳೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಹೆಬ್ರಿ ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]