FDA Exam Scam: ಓಎಂಆರ್ ಶೀಟ್ ದುರ್ಬಳಕೆ ಆಗಿಲ್ಲ – ಕೆಇಎ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ವಿವಿಧ ನಿಗಮ ಮಂಡಳಿಗಳ ಎಫ್‌ಡಿಎ (FDA Exam Scam) ಪರೀಕ್ಷೆಯಲ್ಲಿ ಓಎಂಆರ್ ಶೀಟ್‌ಗೆ ಸಂಬಂಧಿಸಿದಂತೆ ಯಾವುದೇ ಅಕ್ರಮ ನಡೆದಿಲ್ಲ, ದುರ್ಬಳಕೆಯೂ ಆಗಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌‌. ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಲಬುರಗಿಯಲ್ಲಿ (Kalaburagi) ಪರೀಕ್ಷೆ ಬರೆಯುವಾಗ ಬ್ಲೂಟೂಥ್ ಬಳಸಲು ಯತ್ನಿಸಿದವರನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಆದರೆ ಓಎಂಆರ್ ಶೀಟ್‌ನಲ್ಲಿ ಯಾವ ದುರ್ಬಳಕೆಯೂ ಕಂಡುಬಂದಿಲ್ಲ. ಈ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ – ಎಫ್‍ಡಿಎ ಪರೀಕ್ಷೆ ಮುಂದೂಡಿಕೆ

ನಕಲು ಮಾಡುವುದು ಸೇರಿದಂತೆ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ಕೆಇಎ ಕಟ್ಟೆಚ್ಚರ ವಹಿಸಿತ್ತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ- ಹಾವೇರಿ ಪೊಲೀಸ್ ಪೇದೆ ಅರೆಸ್ಟ್

ಎಲ್ಲ ಅಭ್ಯರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸುವುದಕ್ಕಾಗಿ ಪಾರದರ್ಶಕ ವ್ಯವಸ್ಥೆಯಡಿ ಪರೀಕ್ಷೆ ನಡೆಸುವುದು ಕೆಇಎ ಗುರಿಯಾಗಿದೆ. ಯಾವುದೇ ಅಕ್ರಮ ಪತ್ತೆಯಾದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]