ಮಾತ್ರೆ, ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ – ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಐವರ ಬಂಧನ

– 3.9 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ (Gold) ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ (Airport) ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು (Bengaluru) ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!

ಆರೋಪಿಗಳು ಮಾತ್ರೆಗಳಲ್ಲಿ, ಒಳ ಉಡುಪು ಹಾಗೂ ಮಹಿಳೆಯರ ಪರ್ಸ್‍ಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದೇವರಿಗೆ ಕೈ ಮುಗಿದು ದೇವಸ್ಥಾನದ ಹುಂಡಿಯನ್ನೇ ದೋಚಿದ ಖದೀಮರು