ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

ಬೆಂಗಳೂರು:‌ ಇಲ್ಲಿನ ರೇಸ್‌ಕೋರ್ಸ್‌ (Race Course) ಬುಕ್ಕಿಂಗ್‌ ಕೌಂಟರ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದಲ್ಲಿ ತಡರಾತ್ರಿ ನಡೆದಿದೆ.

ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್​ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ. ಬುಕ್ಕಿಂಗ್‌ ಕೌಂಟರ್​ಗಳನ್ನ ಲಾಕ್​ ಮಾಡಿದ್ದಾರೆ. ಅಲ್ಲದೇ ಕೌಂಟರ್​ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿಯನ್ನು ಅಂತ್ಯಗೊಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸ್ಪರ್ಶಿಸಿ ಯಶ್‌ ಅಭಿಮಾನಿಗಳ ಸಾವು – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ವಿತರಣೆ 

ದಾಳಿ ವೇಳೆ ದಾಖಲೆಗಳಿಲ್ಲದ 3.47 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಈ ವೇಳೆ ಸಿಕ್ಕವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸುಮಾರು 60 ಜನರನ್ನ ವಶಕ್ಕೆ ಪಡೆದು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ನೋಟೀಸ್‌ ನೀಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಂಸತ್ ದಾಳಿ: ಮೈಸೂರಿನ ಮನೋರಂಜನ್‌ ಸೇರಿ ಐವರಿಗೆ ಮಂಪರು ಪರೀಕ್ಷೆ

ದಾಳಿ ಸಂದರ್ಭದಲ್ಲಿ ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಿರುವ ಸಿಸಿಬಿ ಪೊಲೀಸರು, ದಾಖಲೆ ಸಲ್ಲಿಸಲು ವಿಫಲರಾದ್ರೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್‌ ಮುಸ್ಲಿಂ ಥರ ಕಾಣ್ತಾರೆ: ಸಿ.ಟಿ.ರವಿ