ಹೆಣ್ಣು ಭ್ರೂಣ ಹತ್ಯೆ ಪ್ರಕರಣ – ಸಿಐಡಿಯಿಂದ ಆರೋಗ್ಯ ಇಲಾಖೆಗೆ ವರದಿ ಕೊಡಲು ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ (Foeticide) ಪ್ರಕರಣದಲ್ಲಿ ಸಿಐಡಿ (CID) ಬಹುತೇಕ ತನಿಖೆ ಮುಗಿಸಿದೆ. ಭ್ರೂಣ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರಗಳ ಮೂಲ ಸಿಐಡಿ ತನಿಖೆಯಲ್ಲೂ ಕೂಡ ಪತ್ತೆಯಾಗಿಲ್ಲ. ಹೀಗಾಗಿ ಸರ್ಕಾರದಿಂದ ಅನುಮತಿ ಪಡೆದು ಆರೋಗ್ಯ ಇಲಾಖೆಗೆ (Health Department) ವರದಿ ಕೊಡಲು ಸಿದ್ಧತೆ ಮಾಡಿಕೊಂಡಿದೆ.

ಸ್ಕ್ಯಾನಿಂಗ್ ಯಂತ್ರಗಳ ಮಾರಾಟ ಹಾಗೂ ಬಳಕೆ ಅಕ್ರಮವಾಗಿದ್ದು, ಆದರೆ ಭ್ರೂಣ ಪತ್ತೆಗೆ ಬಳಸುತ್ತಿದ್ದ ಯಂತ್ರಗಳು ತಂದಿದ್ದು ಎಲ್ಲಿಂದ ಎಂಬುದೇ ನಿಗೂಢವಾಗಿದೆ. ಬೈಯಪ್ಪನಹಳ್ಳಿ ಪೊಲೀಸರು ಚೆನ್ನೈ ಮೂಲದ ವೈದ್ಯ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯ ಡಾ. ಚಂದನ್ ಬಲ್ಲಾಳ್, ಆತನ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಶನಿಸ್ಟ್ ರಿಜ್ಮಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್ ಎಂಬಾತನ ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಗ್ಯಾಂಗ್‌ರೇಪ್ – ಇಬ್ಬರ ವಿರುದ್ಧ ದೂರು ದಾಖಲು

ಆರೋಪಿಗಳು ಮಂಡ್ಯದ ಆಲೆಮನೆಯಲ್ಲಿ ಸ್ಕ್ಯಾನಿಂಗ್ ಯಂತ್ರಗಳನ್ನಿಟ್ಟು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿತ್ತು. ಕೇವಲ ಮೂರೇ ತಿಂಗಳಲ್ಲಿ 245 ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಒಂದೊಂದು ಭ್ರೂಣ ಹತ್ಯೆಗೆ ಪ್ಯಾಕೇಜ್ ರೀತಿ 60,000 ಫಿಕ್ಸ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಎರಡು ತಿಂಗಳ ಹಿಂದೆ ಸಿಐಡಿಗೆ ವರ್ಗಾವಣೆ ಮಾಡಿದ್ದು, ಇದೀಗ ತನಿಖೆ ಬಹುತೇಕ ಮುಕ್ತಾಯಗೊಂಡಿದೆ. ಇದನ್ನೂ ಓದಿ: ಪ್ರೀತಿಸಲು ಒಪ್ಪದ ಬಾಲಕಿ ಕೊಂದಿದ್ದವನಿಂದ ಆತ್ಮಹತ್ಯೆ ಯತ್ನ- ಸಾಯಲು ಬಿಡಿ ಎಂದು ಡ್ರಾಮಾ