ಇಂಗ್ಲೆಂಡ್‌ ವಿರುದ್ಧ ಆರ್ಭಟ – ಸಿಕ್ಸರ್‌ನಿಂದಲೇ ಪಾಕ್‌ ದಿಗ್ಗಜನ ದಾಖಲೆ ಸರಿಗಟ್ಟಿದ ಯಶಸ್ವಿ!

ರಾಜ್‌ಕೋಟ್‌: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬ್ಯಾಕ್‌ ಟು ಬ್ಯಾಕ್‌ ಶತಕ ಸಿಡಿಸುವ ಜೊತೆಗೆ ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ.

ರಾಜ್‌ಕೋಟ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯದಲ್ಲಿ 2ನೇ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್‌ ದ್ವಿಶತಕ ಸಿಡಿಸಿದ ಜೈಸ್ವಾಲ್‌ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಸಿಡಿಸಿದ ವಿಶ್ವದ 2ನೇ ಆಟಗಾರ ಹಾಗೂ ಟೀಂ ಇಂಡಿಯಾದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಆಂಗ್ಲರನ್ನು ಹುರಿದು ಮುಕ್ಕಿದ ಭಾರತ; ಟಾಪ್‌-10 ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ ಎಷ್ಟನೇ ಸ್ಥಾನ?

ಒಂದೇ ಇನ್ನಿಂಗ್ಸ್‌ನಲ್ಲಿ ಒಟ್ಟು 12 ಸಿಕ್ಸರ್‌ ಸಿಡಿಸುವ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ. 1996ರಲ್ಲಿ ಜಿಂಬಾಬ್ವೆ ವಿರುದ್ಧ ಪಾಕ್‌ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ 12 ಸಿಕ್ಸರ್‌ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಅಲ್ಲದೇ ಈ ಹಿಂದೆ ಮಯಾಂಕ್ ಅಗರ್ವಾಲ್ ಮತ್ತು ನವಜೋತ್ ಸಿಂಗ್ ಸಿಧು ಅವರ ಹೆಸರಲ್ಲಿದ್ದ 8 ಸಿಕ್ಸರ್‌ಗಳ ಜಂಟಿ ದಾಖಲೆಯನ್ನೂ ನುಚ್ಚುನೂರು ಮಾಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ 434 ರನ್‌ಗಳ ದಾಖಲೆ ಜಯ – ಭಾರತದ ಟಾಪ್-5 ಟೆಸ್ಟ್ ಲಿಸ್ಟ್!

ಆಂಗ್ಲರ ವಿರುದ್ಧ ದ್ವಿಶತಕ ಸಿಡಿಸಿದ ಮೊದಲ ಭಾರತೀಯ:
ರಣಜಿ ಟ್ರೋಫಿ, ದುಲೀಪ್‌ ಟ್ರೋಫಿ, ಇರಾನಿ ಕಪ್‌ ಟೂರ್ನಿಗಳಲ್ಲಿ ದ್ವಿಶತಕ ಸಿಡಿಸಿದ್ದ 22 ವರ್ಷ ವಯಸ್ಸಿನ ಯಶಸ್ವಿ ಜೈಸ್ವಾಲ್‌ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ದ್ವಿಶತಕಗಳ ಖಾತೆ ತೆರೆದಿದ್ದಾರೆ. ಅಲ್ಲದೇ ವಿನೋದ್‌ ಕಾಂಬ್ಳಿ, ವಿರಾಟ್‌ ಕೊಹ್ಲಿ ನಂತರ ಬ್ಯಾಕ್‌ ಟು ಬ್ಯಾಕ್‌ ದ್ವಿಶತಕ ಸಿಡಿಸಿದ 3ನೇ ಭಾರತೀಯ ಮತ್ತು ಇಂಗ್ಲೆಂಡ್‌ ವಿರುದ್ಧ ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಯನ್ನೂ ಹೆಗಲಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: ಜೈಸ್ವಾಲ್‌, ಜಡೇಜಾ ಶೈನ್‌; ಆಂಗ್ಲರ ವಿರುದ್ಧ ಭಾರತಕ್ಕೆ 434 ರನ್‌ ಗೆಲುವು – ಟೆಸ್ಟ್‌ ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ

ಸರ್ಫರಾಝ್‌ ಖಾನ್‌ ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ
ಮೊದಲ ಇನಿಂಗ್ಸ್‌ನಲ್ಲೂ ಬಿರುಸಿನ 61 ರನ್‌ ಬಾರಿಸಿ ರನ್‌ಔಟ್‌ಗೆ ತುತ್ತಾಗಿದ್ದ ಸರ್ಫರಾಝ್‌ ಖಾನ್‌ ತಮ್ಮ ಪದಾರ್ಪಣೆಯ ಟೆಸ್ಟ್‌ ಪಂದ್ಯವನ್ನು ಮತ್ತಷ್ಟು ಸ್ಮರಣೀಯವನ್ನಾಗಿಸಿಕೊಂಡು. 2ನೇ ಇನಿಂಗ್ಸ್‌ನಲ್ಲೂ ಹೊಡಿ-ಬಡಿ ಆಟವಾಡಿದ್ದಾರೆ. ಎದುರಿಸಿದ 72 ಎಸೆತಗಳಲ್ಲಿ 6 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 68 ರನ್‌ ಸಿಡಿಸಿ ಮಿಂಚಿದ್ದಾರೆ.