ರಾಜ್ಯದ ಹವಾಮಾನ ವರದಿ: 12-04-2024

ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಕರುನಾಡಿಗೆ ವರುಣದೇವನ ಆಗಮನದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಇದೇ ತಿಂಗಳ 12 ಮತ್ತು 13ರಂದು ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?:
* ಏ.11: ಬೀದರ್, ಕಲಬುರಗಿ, ವಿಜಯಪುರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.
* ಏ.12: ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು.
* ಏ.13: ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು ಮಂಡ್ಯ.
* ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲಬುರಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.
* ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಈ ಮಧ್ಯೆ ಮತ್ತೊಂದು ಗಮನಾರ್ಹ ವಿಚಾರ ಅಂದ್ರೆ, ಕಳೆದ ಒಂದು ತಿಂಗಳಿನಿಂದ ಕಾಡಿದ್ದ ಬಿಸಿಲಿನ ತಾಪಮಾನ ಕೂಡ ಇಳಿಕೆ ಕಾಣುವ ಸಾಧ್ಯತೆ ಇದೆ. ವಾಡಿಕೆಗಿಂತ ಹೆಚ್ಚಾಗಿ ಅಬ್ಬರಿಸುತ್ತಿದ್ದ ಬಿಸಿಲು, ಸದ್ಯ ಮುಂದಿನ ಒಂದು ವಾರಗಳ ಕಾಲ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಾಣಲಿದೆ. ಸದ್ಯ ಬೆಂಗಳೂರು ಸೇರಿದಂತೆ ಇತರೆ ಭಾಗದಲ್ಲಿ ಸಾಮಾನ್ಯ ವರ್ಷಗಳಂತೆ ವಾಡಿಕೆಯಷ್ಟು ಬಿಸಿಲು ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪಬ್ಲಿಕ್ ಟಿವಿಗೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 34-22
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 35-22
ಮೈಸೂರು: 37-23

ಮಂಡ್ಯ: 37-23
ಮಡಿಕೇರಿ: 29-18
ರಾಮನಗರ: 36-23
ಹಾಸನ: 34-21
ಚಾಮರಾಜನಗರ: 36-23
ಚಿಕ್ಕಬಳ್ಳಾಪುರ: 34-21

ಕೋಲಾರ: 34-22
ತುಮಕೂರು: 36-22
ಉಡುಪಿ: 33-27
ಕಾರವಾರ: 33-26
ಚಿಕ್ಕಮಗಳೂರು: 32-20
ದಾವಣಗೆರೆ: 37-23

weather (1)

ಹುಬ್ಬಳ್ಳಿ: 38-23
ಚಿತ್ರದುರ್ಗ: 37-23
ಹಾವೇರಿ: 38-23
ಬಳ್ಳಾರಿ: 39-26
ಗದಗ: 37-24
ಕೊಪ್ಪಳ: 37-26

weather

ರಾಯಚೂರು: 38-26
ಯಾದಗಿರಿ: 38-26
ವಿಜಯಪುರ: 36-25
ಬೀದರ್: 36-23
ಕಲಬುರಗಿ: 37-26
ಬಾಗಲಕೋಟೆ: 37-26