ಮಾಜಿ ಕಾಂಗ್ರೆಸ್‌ ಶಾಸಕ ಅಖಂಡ ಬುಧವಾರ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ (Akhanda Srinivas Murthy) ಬುಧವಾರ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಎಸ್‌ಪಿಯಿಂದ (BSP) ಪುಲಿಕೇಶಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಅಖಂಡ ಶ್ರೀನಿವಾಸ ಮೂರ್ತಿ ಸೋತಿದ್ದರು. ಅಖಂಡ ಬಿಜೆಪಿ ಸೇರ್ಪಡೆಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಅನುಕೂಲವಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್

 

ಪುಲಿಕೇಶಿನಗರ (Pulakeshinagar) ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದು 2018ರ ಚುನಾವಣೆಯಲ್ಲಿ 81 ಸಾವಿರ ಮತಗಳಿಂದ ಅಖಂಡ ಶ್ರೀನಿವಾಸ ಮೂರ್ತಿ ಗೆಲುವು ಸಾಧಿಸಿದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು.

ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಾಂಗ್ರೆಸ್ಸಿಗರೇ ಬೆಂಕಿ ಹಚ್ಚಿದ್ದಾರೆ. ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಅವರನ್ನು ಮೂಲೆಗುಂಪು ಮಾಡಿ ಅನ್ಯಾಯ ಮಾಡಿದ್ದಾರೆ ಎಂದಿ ಬಿಜೆಪಿ ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ವಿರುದ್ಧ ಆರೋಪಿಸಿತ್ತು.  ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

 

ವಿಧಾನಸಭಾ ಚುನಾವಣಾ ಸಮಯದಲ್ಲಿ ಪ್ರತಿಕ್ರಿಯಿಸಿದ್ದ ಅಖಂಡ ಶ್ರೀನಿವಾಸ ಮೂರ್ತಿ, ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದರು ಎಂದು ತಿಳಿಸಿದ್ದರು.