ಗ್ಯಾಸ್ ಸಿಲಿಂಡರ್ ಸ್ಫೋಟ – ನಾಲ್ಕು ಗುಡಿಸಲುಗಳು ಭಸ್ಮ

ಯಾದಗಿರಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Blast) ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾದ ಘಟನೆ ಸುರಪುರದ (Surapura) ಮಲ್ಲಾ ಬಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎನ್ನುವವರಿಗೆ ಸೇರಿದ ಗುಡಿಸಲುಗಳು ಸಿಲಿಂಡರ್ ಸ್ಫೋಟದಿಂದ ಹೊತ್ತಿ ಉರಿದಿವೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದು ಗಂಟೆ ಕಾಲ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿಸಿ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ – ಪಾಠ ಹೇಳಿಕೊಡಲು ಹೋದ ಶಿಕ್ಷಕಿ ಹೀಗೆ ಮಾಡೋದಾ?

ಕೆಂಭಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 7 ವರ್ಷದ ಮಗುವಿಗೆ ಕಚ್ಚಿದ್ದಕ್ಕೆ ಸಾಕು ನಾಯಿಯನ್ನೇ ಕೊಂದು ತಿಂದ!